ಯೆಶಾಯ 26:1 - ಪರಿಶುದ್ದ ಬೈಬಲ್1 ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು: ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ. ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಗೀತವನ್ನು ಹಾಡುವರು - ನಮಗೆ ಬಲವಾದ ಪಟ್ಟಣವಿದೆ. [ಯೆಹೋವನು ತನ್ನ] ರಕ್ಷಣೆಯನ್ನು ಕೋಟೆಯನ್ನಾಗಿಯೂ ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು: ನಮಗೆ ಬಲವಾದ ಪಟ್ಟಣವಿದೆ, ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ದೇವರು ಮಾಡುವರು. ಅಧ್ಯಾಯವನ್ನು ನೋಡಿ |
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.