Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:13 - ಪರಿಶುದ್ದ ಬೈಬಲ್‌

13 ಯೆಹೋವನೇ, ನೀನೇ ನಮ್ಮ ದೇವರು. ಆದರೆ ಹಿಂದಿನ ಕಾಲದಲ್ಲಿ ನಾವು ಇತರ ಪ್ರಭುಗಳನ್ನು ಅನುಸರಿಸಿದೆವು. ನಾವು ನಮ್ಮ ಒಡೆಯರುಗಳಿಗೆ ಸೇರಿದ್ದೆವು. ಆದರೆ ಈಗ ಜನರು ಒಂದೇ ಹೆಸರನ್ನು, ಅಂದರೆ ನಿನ್ನ ಹೆಸರನ್ನೇ ನೆನಪುಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಮ್ಮ ದೇವರಾದ ಸರ್ವೇಶ್ವರಾ, ಇಗೋ, ನೋಡು ನಮ್ಮನಾಳಿಹರು ಭೂರಾಜರು ನಿನ್ನ ಬಿಟ್ಟು, ಆದರೇನು, ಹೊಗಳುವೆವು ನಿನ್ನ ನಾಮವನೆ ಮುನ್ನಿಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದರು; ಈಗ ನಿನ್ನ ನಾಮವನ್ನು ಹೊಗಳುವದಕ್ಕೆ ನಿನ್ನಿಂದಲೇ ನಮಗೆ ಅವಕಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರೇ, ನಮ್ಮ ದೇವರೇ, ನಿಮ್ಮ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿಮ್ಮ ನಾಮವನ್ನು ಮಾತ್ರವೇ ನಾವು ಗೌರವಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:13
15 ತಿಳಿವುಗಳ ಹೋಲಿಕೆ  

ಆದರೆ ಈಗ ನೀವು ಪಾಪದಿಂದ ಬಿಡುಗಡೆಯಾಗಿ ದೇವರ ಗುಲಾಮರಾಗಿದ್ದೀರಿ. ಇದರಿಂದ ನಿಮಗೆ ಪರಿಶುದ್ಧ ಜೀವನವೂ ನಿತ್ಯಜೀವವೂ ದೊರೆಯುತ್ತವೆ.


ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.


ನಿಮ್ಮ ದೇಶವು ಕೈಯಿಂದ ಮಾಡಿದ ವಿಗ್ರಹಗಳಿಂದ ತುಂಬಿದ್ದು ಜನರು ಅವುಗಳನ್ನು ಆರಾಧಿಸುತ್ತಾರೆ.


ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.


ನಿನ್ನ ದೇವರೂ ಒಡೆಯನೂ ಆಗಿರುವ ಯೆಹೋವನು ತನ್ನ ಜನರಿಗಾಗಿ ಯುದ್ಧ ಮಾಡುವನು. ಅವನು ನಿನಗೆ ಹೇಳುವುದೇನೆಂದರೆ, “ಇಗೋ, ನಾನು ನಿನ್ನಿಂದ ವಿಷದ ಪಾತ್ರೆಯನ್ನು (ಶಿಕ್ಷೆ) ತೆಗೆದುಬಿಡುತ್ತೇನೆ. ಇನ್ನು ಮುಂದೆ ನನ್ನ ಸಿಟ್ಟಿನಿಂದ ನೀನು ಶಿಕ್ಷಿಸಲ್ಪಡುವದಿಲ್ಲ.


ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.


ನಾನು ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದೆ. ಈಗ ಜೆರುಸಲೇಮನ್ನೂ ಅದರ ಜನರು ಮಾಡಿರುವ ವಿಗ್ರಹಗಳನ್ನೂ ನಾನು ನಾಶಮಾಡುವೆನು.’”


ಆದರೆ ಜೆರುಸಲೇಮಿನ ಜನರು ಶೀಶಕನ ಸೇವಕರಾಗುವರು. ಯಾಕೆಂದರೆ ನನ್ನ ಸೇವೆಮಾಡುವುದಕ್ಕೂ ಇತರ ರಾಜರುಗಳ ಸೇವೆಮಾಡುವುದಕ್ಕೂ ವ್ಯತ್ಯಾಸವಿದೆ ಎಂಬುದನ್ನು ಅವರು ಅರಿತುಕೊಳ್ಳಬೇಕಾಗಿದೆ.”


ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ. ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ಅವುಗಳಿಗೆ ಅಡ್ಡಬಿದ್ದು ಪೂಜಿಸಬೇಡಿ.


ನಿಮ್ಮನ್ನು ಇತರ ಜನರಿಗಿಂತಲೂ ಉತ್ತಮರೆಂದು ಯಾರು ಹೇಳುತ್ತಾರೆ? ನಿಮ್ಮಲ್ಲಿರುವ ಪ್ರತಿಯೊಂದನ್ನೂ ದೇವರೇ ನಿಮಗೆ ಕೊಟ್ಟಿದ್ದಾನೆ. ಹೀಗಿರುವಾಗ, ನಿಮ್ಮ ಸ್ವಂತ ಶಕ್ತಿಯಿಂದ ಅವುಗಳನ್ನು ಪಡೆದುಕೊಂಡವರಂತೆ ಏಕೆ ಜಂಬಕೊಚ್ಚಿಕೊಳ್ಳುವಿರಿ?


ನೀವು ಸತ್ಯವನ್ನು ತಿಳಿದುಕೊಳ್ಳುವಿರಿ. ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.


ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ. ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.


ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. ಈಗ ನಾವು ಹೇಗೆ ರಕ್ಷಿಸಲ್ಪಡುವೆವು?


ಬೇರೆ ದೇಶಗಳವರು ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತಾರೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು