ಯೆಶಾಯ 26:18 - ಪರಿಶುದ್ದ ಬೈಬಲ್18 ಅದೇ ರೀತಿಯಲ್ಲಿ ನಾವು ನೋವನ್ನು ಅನುಭವಿಸುತ್ತೇವೆ. ನಾವು ಹೆರುವದು ಕೇವಲ ಗಾಳಿಯನ್ನೇ. ನಾವು ಈ ಲೋಕದೊಳಗೆ ಹೊಸಜೀವಿಗಳನ್ನು ನಿರ್ಮಿಸುವದಿಲ್ಲ. ನಾವು ದೇಶಕ್ಕೆ ರಕ್ಷಣೆಯನ್ನು ತರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ, ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪ್ರಸವವೇದನೆಪಟ್ಟು ನಾವು ಹಡೆದದ್ದು ಗಾಳಿಯನ್ನೆ ಆಗಲಿಲ್ಲ ಜಗಕೆ ನಮ್ಮಿಂದ ಯಾವ ರಕ್ಷಣೆ ನೀಡಲಿಲ್ಲ ನಾವು ಜನ್ಮ ಲೋಕನಿವಾಸಿಗಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ, ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು. ಭೂಮಿಗೆ ನಮ್ಮಿಂದ ಯಾವ ಬಿಡುಗಡೆಯೂ ಆಗಲಿಲ್ಲ. ಭೂಲೋಕದ ಜನರಿಗೆ ಜನ್ಮ ಕೊಡಲಿಲ್ಲ. ಅಧ್ಯಾಯವನ್ನು ನೋಡಿ |
ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.