ಯೆಶಾಯ 26:2 - ಪರಿಶುದ್ದ ಬೈಬಲ್2 ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಕೊಳ್ಳುವ ಜನಾಂಗವು ಪ್ರವೇಶಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ. ಅಧ್ಯಾಯವನ್ನು ನೋಡಿ |
ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”