Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:20 - ಪರಿಶುದ್ದ ಬೈಬಲ್‌

20 ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಿಲು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:20
34 ತಿಳಿವುಗಳ ಹೋಲಿಕೆ  

ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೋ ಶಾಶ್ವತವಾದದ್ದು. ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.


ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.


ನೀವು ಪ್ರಾರ್ಥನೆ ಮಾಡಬೇಕಾದರೆ, ನಿಮ್ಮ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ನಿಮಗೆ ಕಾಣದಿರುವ ನಿಮ್ಮ ತಂದೆಗೆ ಪ್ರಾರ್ಥಿಸಿ. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುವನು.


ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.


ಯೆಹೋವನ ಹೆಸರು ಬಲವಾದ ಗೋಪುರದಂತಿದೆ. ಒಳ್ಳೆಯವರು ಅದರೊಳಗೆ ಓಡಿಹೋಗಿ ಸುರಕ್ಷಿತವಾಗಿರುವರು.


ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು. ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಅಡಗಿಸಿಕೊ.


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ಆದರೆ ಸ್ವಲ್ಪ ಸಮಯದ ನಂತರ ನನ್ನ ಸಿಟ್ಟು ತಣ್ಣಗಾಗುವದು. ಅಶ್ಶೂರವು ಸಾಕಷ್ಟು ನಿಮ್ಮನ್ನು ಶಿಕ್ಷಿಸಿದನೆಂದು ನಾನು ತೃಪ್ತಿಗೊಳ್ಳುವೆನು.”


ನೀನು ನನಗೆ ಆಶ್ರಯದುರ್ಗವಾಗಿರುವೆ. ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ. ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.


“ನನ್ನ ಜನರೇ, ನನ್ನ ಮಾತನ್ನು ಕೇಳಿರಿ. ನನ್ನ ಕಟ್ಟಳೆ ಮತ್ತು ನ್ಯಾಯ ಬೆಳಕಿನಂತಿದ್ದು ಹೇಗೆ ಜೀವಿಸಬೇಕೆಂಬುದನ್ನು ಜನರಿಗೆ ತೋರಿಸುತ್ತವೆ.


ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.


“ಆದ್ದರಿಂದ ಜನರಿಗೆ ಹೀಗೆ ಹೇಳು: ನಮ್ಮ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ‘ನಾನು ನನ್ನ ಜನರನ್ನು ಬಹುದೂರದಲ್ಲಿರುವ ಜನಾಂಗಗಳ ಮಧ್ಯಕ್ಕೆ ಹೋಗುವಂತೆ ಮಾಡಿದ್ದು ನಿಜ. ನಾನು ಅನೇಕ ದೇಶಗಳಲ್ಲಿ ಅವರನ್ನು ಚದರಿಸಿರುತ್ತೇನೆ. ಅವರು ಪರದೇಶಗಳಲ್ಲಿರುವಾಗ ಸ್ವಲ್ಪಕಾಲ ನಾನೇ ಅವರಿಗೆ ದೇವಾಲಯವಾಗಿರುವೆನು.


“ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”


ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ; ಶತ್ರುಗಳಿಂದ ನನ್ನನ್ನು ರಕ್ಷಿಸು.


ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಆಮೇಲೆ ಯೆಹೋವನು ನೋಹನಿಗೆ, “ಈ ಕಾಲದವರಲ್ಲಿ ನೀನೊಬ್ಬನೇ ನೀತಿವಂತನಾಗಿರುವೆ. ಆದ್ದರಿಂದ ನಿನ್ನ ಕುಟುಂಬದವರೆಲ್ಲರನ್ನು ಕರೆದುಕೊಂಡು ನಾವೆಯೊಳಗೆ ಹೋಗು.


ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.


ದೇವರ ಆಜ್ಞೆಯಂತೆ ಈ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು.


“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.


ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.


“ನಿನ್ನ ಕೋಪವು ಇಳಿಯುವ ತನಕ ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟಿದ್ದು, ನೀನು ಗೊತ್ತುಪಡಿಸಿದ ಸಮಯದಲ್ಲಿ ನನ್ನನ್ನು ಜ್ಞಾಪಿಸಿಕೊಂಡಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು.


ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.


ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.


ಯೆಹೋವನೂ ಆ ಸೈನ್ಯವೂ ದೂರದಿಂದ ಬರುತ್ತಿದ್ದಾರೆ. ದಿಗಂತದ ಆಚೆಯಿಂದ ಅವರು ಬರುತ್ತಿದ್ದಾರೆ. ತನ್ನ ಸಿಟ್ಟನ್ನು ಪ್ರದರ್ಶಿಸುವದಕೋಸ್ಕರ ಯೆಹೋವನು ಈ ಸೈನ್ಯವನ್ನು ಉಪಯೋಗಿಸುವನು. ಈ ಸೈನ್ಯವು ಇಡೀ ಭೂಮಿಯನ್ನು ಹಾಳು ಮಾಡುವುದು.”


ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ.


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.


ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.


ಸಹಾಯಕ್ಕಾಗಿ ಮಹೋನ್ನತನಾದ ದೇವರಿಗೆ ಮೊರೆಯಿಡುವೆನು. ಆತನು ಕೊರತೆಗಳನ್ನೆಲ್ಲಾ ನೀಗಿಸುವನು.


ಆಪತ್ತಿನಲ್ಲಿಯೂ ಸಮಾಧಾನದಿಂದಿರಲು ನೀನು ಅವನಿಗೆ ಸಹಾಯಮಾಡುವೆ. ದುಷ್ಟರು ಸಮಾಧಿಗಳಿಗೆ ಸೇರುವವರೆಗೆ ಸಮಾಧಾನದಿಂದಿರಲು ನೀನು ಅವನಿಗೆ ನೆರವು ನೀಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು