Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:7 - ಪರಿಶುದ್ದ ಬೈಬಲ್‌

7 ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು ಸುಲಭವಾಗುವಂತೆ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಶಿಷ್ಟನ ಮಾರ್ಗವು ನೇರವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀತಿವಂತನ ಮಾರ್ಗವು ಸಮಾನವಾಗಿದೆ. ನೀನು ಅತ್ಯಧಿಕವಾದ ಯಥಾರ್ಥವಂತನು, ನೀತಿವಂತನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:7
30 ತಿಳಿವುಗಳ ಹೋಲಿಕೆ  

ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ಪ್ರಿಯ ಮಕ್ಕಳೇ, ನಿಮ್ಮನ್ನು ಯಾರೂ ತಪ್ಪುಮಾರ್ಗಕ್ಕೆ ಎಳೆಯದಂತೆ ನೋಡಿಕೊಳ್ಳಿರಿ. ಕ್ರಿಸ್ತನು ನೀತಿವಂತನಾಗಿದ್ದಾನೆ. ಆತನಂತೆ ನೀತಿವಂತನಾಗಿರಲು ಬಯಸುವವನು ಒಳ್ಳೆಯದನ್ನು ಮಾಡಬೇಕು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.


ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.


ಸಧರ್ಮಿಯು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು.


ಯಾಕೆಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ; ಆತನು ನ್ಯಾಯವನ್ನು ಪ್ರೀತಿಸುತ್ತಾನೆ. ನೀತಿವಂತರು ಆತನ ಮುಖವನ್ನು ನೋಡುವರು.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು.


ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೋ ನಾಶಪಡಿಸುವನು.


ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು.


ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.


ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ.


ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.


ಯೆಹೋವನೇ ನಿನ್ನ ಮಾರ್ಗಗಳನ್ನು ನನಗೆ ತಿಳಿಸು. ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು.


ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು. ನೀನೇ ನನ್ನ ದೇವರು, ನೀನೇ ನನ್ನ ರಕ್ಷಕ. ಹಗಲೆಲ್ಲಾ ನಿನ್ನಲ್ಲಿ ಭರವಸವಿಟ್ಟಿರುವೆ.


ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.


ಆದರೆ ಶಾಂತಿಸಮಾಧಾನಗಳು ಬರುತ್ತವೆ. ಆಗ ಜನರು ತಮ್ಮ ಸ್ವಂತ ಹಾಸಿಗೆಗಳ ಮೇಲೆ ವಿಶ್ರಮಿಸಿಕೊಳ್ಳುವರು; ದೇವರು ಅಪೇಕ್ಷಿಸುವ ರೀತಿಯಲ್ಲಿ ಜೀವಿಸುವರು.


ಯೆಹೋವನೇ, ಮಾನವನ ಜೀವ ಅವನ ಸ್ವಾಧೀನದಲ್ಲಿಲ್ಲವೆಂಬುದು ನನಗೆ ಗೊತ್ತು. ಜನರಿಗೆ ಸರಿಯಾದ ಜೀವನ ಕ್ರಮಗೊತ್ತಿಲ್ಲ.


ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.


ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ.


ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೊ. ಆಗ ಆತನು ನಿನಗೆ ಸಹಾಯ ಮಾಡುವನು.


ನೀತಿವಂತನು ಯಥಾರ್ಥನಾಗಿದ್ದರೆ ಅವನ ಜೀವನವು ಸರಾಗವಾಗಿರುವುದು. ಆದರೆ ಕೆಡುಕನು ತನ್ನ ಕೆಟ್ಟಕಾರ್ಯಗಳಿಂದ ನಾಶವಾಗುವನು.


ಕೆಟ್ಟವರು ಬೇರೆಯವರನ್ನು ಮೋಸಗೊಳಿಸುವುದಕ್ಕೇ ಪ್ರಯತ್ನಿಸುವರು. ಒಳ್ಳೆಯವರಾದರೋ ಯಥಾರ್ಥವಂತರೂ ನ್ಯಾಯವಂತರೂ ಆಗಿದ್ದಾರೆ.


ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು