Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:8 - ಪರಿಶುದ್ದ ಬೈಬಲ್‌

8 ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ. ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೌದು, ಯೆಹೋವನೇ, ನಿನ್ನ ನ್ಯಾಯಕಾರ್ಯಗಳು ತೋರತಕ್ಕ ಮಾರ್ಗದಲ್ಲಿ ನಿನ್ನನ್ನು ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಕೇವಲ ಇಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೌದು, ಯೆಹೋವ ದೇವರೇ, ನಿಮ್ಮ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಾವು ನಿಮಗೋಸ್ಕರ ಕಾದುಕೊಂಡಿದ್ದೇವೆ, ನಿಮ್ಮ ನಾಮಸ್ಮರಣೆಯೇ ನಮ್ಮ ಹೃದಯದ ಬಯಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:8
39 ತಿಳಿವುಗಳ ಹೋಲಿಕೆ  

“ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿಮುಂಜಾನೆ ನಮಗೆ ಶಕ್ತಿ ದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು.


ಸ್ವಬಲದಿಂದ ಪರ್ವತಗಳನ್ನು ನಿರ್ಮಿಸಿದಾತನು ದೇವರೇ. ಆತನು “ಶೌರ್ಯ” ಎಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾನೆ.


ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು’” ಅಂದನು.


ದೇವರ ಪ್ರೀತಿಯ ಕಡೆಗೂ ಮತ್ತು ಕ್ರಿಸ್ತನ ತಾಳ್ಮೆಯ ಕಡೆಗೂ ನಿಮ್ಮ ಹೃದಯಗಳನ್ನು ಪ್ರಭುವೇ ಮುನ್ನಡೆಸಲಿ ಎಂದು ನಾವು ಪ್ರಾರ್ಥಿಸುತ್ತೇವೆ.


ಆದರೆ ನಾವಿನ್ನೂ ಹೊಂದಿಕೊಂಡಿಲ್ಲದೆ ಇರುವುದನ್ನು ನಿರೀಕ್ಷಿಸುತ್ತಾ ತಾಳ್ಮೆಯಿಂದ ಅದಕ್ಕಾಗಿ ಕಾಯುತ್ತಿದ್ದೇವೆ.


ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟುಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ಈ ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ.


ಯೆಹೋವನು ಹೇಳುವುದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.


ಆ ಸಮಯದಲ್ಲಿ ಜನರು, “ನಮ್ಮ ದೇವರು ಇಲ್ಲಿದ್ದಾನೆ. ಆತನಿಗಾಗಿಯೇ ನಾವು ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ. ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತರಾಗಿ ಸಂತೋಷಿಸುವೆವು” ಎಂದು ಹೇಳುವರು.


ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.


ಜೆರುಸಲೇಮಿನ ಸ್ತ್ರೀಯರೇ, ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ.


ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.


ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.


ಪರಲೋಕದಲ್ಲಿ ನೀನಲ್ಲದೆ ನನಗೆ ಬೇರೆ ಯಾರ ಅಗತ್ಯವಿದೆ? ಈ ಲೋಕದಲ್ಲಿ ನಿನ್ನನ್ನಲ್ಲದೆ ಬೇರೆ ಯಾರನ್ನು ಬಯಸಲಿ?


ಆತನ ಎದುರಿನಲ್ಲಿ ನಿರ್ದೋಷಿಯಾಗಿದ್ದೆನು. ಪಾಪದಲ್ಲಿ ಬೀಳದಂತೆ ಎಚ್ಚರಿಕೆಯಾಗಿದ್ದೆನು.


“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.


ಜೆರಿಕೊ ಪಟ್ಟಣದ ಎದುರಾಗಿರುವ ಜೋರ್ಡನ್ ನದಿಯ ಬಳಿಯಲ್ಲಿರುವ ಮೋವಾಬಿನ ಬಯಲಿನಲ್ಲಿ ಯೆಹೋವನು ಇಸ್ರೇಲರಿಗೆ ಮೋಶೆಯ ಮೂಲಕ ಕೊಟ್ಟ ಆಜ್ಞಾವಿಧಿಗಳು ಇವೇ.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”


ನಾನು ಸಹಾಯಕ್ಕಾಗಿ ಯೆಹೋವನ ಕಡೆಗೆ ನೋಡುತ್ತೇನೆ. ದೇವರ ರಕ್ಷಣೆಗಾಗಿ ನಿರೀಕ್ಷಿಸುತ್ತೇನೆ. ನನ್ನ ದೇವರು ನನಗೆ ಕಿವಿಗೊಡುತ್ತಾನೆ.


ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.


ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. ಆತನು ನುಡಿಯನ್ನು ನಂಬಿಕೊಂಡಿದ್ದೇನೆ.


ಆ ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರಮಾಡಿರಿ! ದೂರ ದೇಶಗಳಲ್ಲಿರುವ ಜನರೇ, ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ” ಎಂದು ಹೇಳುವರು.


ಯೆಹೋವನೇ, ನೀನೇ ನನ್ನ ದೇವರು. ನಿನ್ನನ್ನು ಗೌರವಿಸಿ ನಿನ್ನ ನಾಮವನ್ನು ಸ್ತುತಿಸುವೆನು. ನೀನು ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ಬಹಳ ಕಾಲದ ಹಿಂದೆ ನೀನು ಹೇಳಿರುವ ವಿಷಯಗಳು ಸತ್ಯವೇ ಸರಿ. ನೀನು ಮುಂತಿಳಿಸಿದಂತೆಯೇ ಎಲ್ಲವೂ ಸಂಭವಿಸಿದವು.


ಯೆಹೋವನೇ, ನೀನೇ ನಮ್ಮ ದೇವರು. ಆದರೆ ಹಿಂದಿನ ಕಾಲದಲ್ಲಿ ನಾವು ಇತರ ಪ್ರಭುಗಳನ್ನು ಅನುಸರಿಸಿದೆವು. ನಾವು ನಮ್ಮ ಒಡೆಯರುಗಳಿಗೆ ಸೇರಿದ್ದೆವು. ಆದರೆ ಈಗ ಜನರು ಒಂದೇ ಹೆಸರನ್ನು, ಅಂದರೆ ನಿನ್ನ ಹೆಸರನ್ನೇ ನೆನಪುಮಾಡಲಿ.


ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


“ನನ್ನ ಜನರೇ, ನನ್ನ ಮಾತನ್ನು ಕೇಳಿರಿ. ನನ್ನ ಕಟ್ಟಳೆ ಮತ್ತು ನ್ಯಾಯ ಬೆಳಕಿನಂತಿದ್ದು ಹೇಗೆ ಜೀವಿಸಬೇಕೆಂಬುದನ್ನು ಜನರಿಗೆ ತೋರಿಸುತ್ತವೆ.


ಬೇರೆ ದೇಶಗಳವರು ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತಾರೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು.


ನನ್ನ ಆತ್ಮವು ಜೀವಸ್ವರೂಪನಾದ ದೇವರಿಗಾಗಿ ಬಾಯಾರಿದೆ. ನಾನು ಯಾವಾಗ ಆತನನ್ನು ಸಂಧಿಸುವೆನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು