Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:9 - ಪರಿಶುದ್ದ ಬೈಬಲ್‌

9 ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡಿಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ. ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ. ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:9
28 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ನಿನ್ನ ಒಳ್ಳೆಯ ನಿರ್ಧಾರಗಳಿಗಾಗಿ ಕೃತಜ್ಞತೆ ಸಲ್ಲಿಸಲು ನಾನು ಮಧ್ಯರಾತ್ರಿಯಲ್ಲಿ ಎದ್ದೇಳುವೆನು.


ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.


ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.


ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.


ಆ ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು.


ಆದ್ದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.


ನನ್ನನ್ನು ಪ್ರೀತಿಸುವವರನ್ನು ನಾನೂ ಪ್ರೀತಿಸುವೆನು; ಬಹಳವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.


ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರುನೋಡುತ್ತಿರುವ ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ.


ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು. ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯಭಕ್ತಿಯುಳ್ಳವರಾಗುವರು.


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ, ಉಳಿದವರು ಆತನ ಕಡೆಗೆ ತಿರುಗಿಕೊಂಡು ಓಡಿ ಬರುತ್ತಿದ್ದರು.


ಮೃಷ್ಟಾನ್ನವನ್ನು ತಿಂದಿರುವವನಂತೆ ತೃಪ್ತನಾಗಿರುವೆನು. ನನ್ನ ಬಾಯಿ ನಿನ್ನನ್ನು ಕೊಂಡಾಡುವುದು.


ಯೆಹೋವನೇ ನಮ್ಮ ದೇವರು. ಆತನು ಇಡೀ ಪ್ರಪಂಚವನ್ನು ಆಳುವನು.


ರಾತ್ರಿಯಲ್ಲಿ ನಾನು ನಿನ್ನ ಹೆಸರನ್ನೂ ನಿನ್ನ ಉಪದೇಶಗಳನ್ನೂ ಜ್ಞಾಪಿಸಿಕೊಳ್ಳುವೆ.


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.


ಯೆಹೋವನು ತನಗಾಗಿ ಕಾಯುವ ಜನರಿಗೆ ಒಳ್ಳೆಯವನಾಗಿರುತ್ತಾನೆ. ಯೆಹೋವನು ತನ್ನನ್ನು ಎದುರುನೋಡುವ ಜನರಿಗೆ ಒಳ್ಳೆಯವನಾಗಿರುತ್ತಾನೆ.


ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ.


ಯೆಹೋವನೇ ನಮ್ಮ ದೇವರು. ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು