ಯೆಶಾಯ 27:10 - ಪರಿಶುದ್ದ ಬೈಬಲ್10 ಆ ಸಮಯದಲ್ಲಿ ಆ ಮಹಾನಗರವು ನಿರ್ಜನವಾಗಿರುವದು. ಅದು ಮರುಭೂಮಿಯಂತಿರುವದು. ಜನರೆಲ್ಲರೂ ಹೊರಟುಹೋಗಿರುವರು. ಅವರು ಪಲಾಯನಗೈದಿದ್ದಾರೆ. ನಗರವು ತೆರೆದ ಹುಲ್ಲುಗಾವಲಿನಂತಿರುವುದು. ಪಶುಗಳು ಅಲ್ಲಿ ಹುಲ್ಲನ್ನು ಮೇಯುತ್ತವೆ. ದನಗಳು ದ್ರಾಕ್ಷಾಲತೆಯ ಚಿಗುರೆಲೆಗಳನ್ನು ತಿನ್ನುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕೋಟೆಕೊತ್ತಲದ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯನಿವಾಸಸ್ಥಾನವಾಗಿದೆ; ಅಲ್ಲಿ ಕರು ಮೇದು ಮಲಗುವದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕೋಟೆಯ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗುವುದು. ಅಲ್ಲಿ ದನಕರುಗಳು ಮೇದು ಮಲಗುವ ಗೋಮಾಳವಾಗಿದೆ. ಅವು ಅಲ್ಲಿನ ಚಿಗುರುಗಳನ್ನು ತಿಂದುಬಿಡುವುವು. ಅಧ್ಯಾಯವನ್ನು ನೋಡಿ |
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’