Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:3 - ಪರಿಶುದ್ದ ಬೈಬಲ್‌

3 “ಯೆಹೋವನಾದ ನಾನು ಆ ತೋಟವನ್ನು ಚೆನ್ನಾಗಿ ನೋಡಿಕೊಳ್ಳುವೆನು; ಸರಿಯಾದ ಕಾಲದಲ್ಲಿ ತೋಟಕ್ಕೆ ನೀರು ಹೊಯ್ಯುವೆನು. ಹಗಲಿರುಳು ತೋಟವನ್ನು ಕಾಯುವೆನು. ಆ ತೋಟವನ್ನು ಯಾರೂ ಹಾಳುಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನಾದ ನಾನು ತೋಟಗಾರನು, ಕ್ಷಣಕ್ಷಣವೂ ನೀರು ಹೊಯ್ಯುತ್ತಿದ್ದೇನೆ; ಯಾರೂ ಮುಟ್ಟದ ಹಾಗೆ ಹಗಲಿರುಳೂ ಕಾಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರಾದ ನಾನೇ ಅದನ್ನು ಕಾಯುತ್ತೇನೆ. ಸತತವಾಗಿ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ. ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:3
26 ತಿಳಿವುಗಳ ಹೋಲಿಕೆ  

ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಅವರಿಗೆ ಕುರುಬನಾಗಿರುವೆನು. ತಪ್ಪಿಹೋದ ಕುರಿಗಳನ್ನು ನಾನು ಹುಡುಕುವೆನು, ನಾನು ಅವರನ್ನು ಗಮನಿಸುತ್ತಾ ನಡೆಸುವೆನು.


ನಾನು ನನ್ನ ಆತ್ಮವನ್ನು ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನ್ನು ನಿಮ್ಮ ಸ್ವದೇಶಕ್ಕೆ ಬರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಬರುವದು.’” ಇದು ಯೆಹೋವನ ನುಡಿ.


ಯೆಹೋವನಾದ ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರೊಂದಿಗೆ ವಾಸಿಸುತ್ತಾ ಅವರನ್ನು ಆಳುವನು. ಇದು ಯೆಹೋವನಾದ ನನ್ನ ನುಡಿ.


ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.


ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.


ನೀವು ಹುಟ್ಟಿದಾಗ ನಾನು ನಿಮ್ಮನ್ನು ಹೊತ್ತುಕೊಂಡೆನು. ನೀವು ಮುದುಕರಾಗುವಾಗಲೂ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು. ನಿಮ್ಮ ತಲೆಕೂದಲು ನರೆತಾಗಲೂ ನಾನು ನಿಮ್ಮನ್ನು ಹೊರುವೆನು; ಯಾಕೆಂದರೆ ನಾನು ನಿಮ್ಮನ್ನು ಸೃಷ್ಟಿಸಿದೆನು. ಆದ್ದರಿಂದ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು, ನಿಮ್ಮನ್ನು ರಕ್ಷಿಸುವೆನು.”


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.


“ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.


ಇತರ ದೇಶಗಳವರು ನಾನು ಯೆಹೋವನೆಂದು ತಿಳಿಯುವರು. ಇಸ್ರೇಲರನ್ನು ನನ್ನ ವಿಶೇಷ ಜನರೆಂದು ಅವರಿಗೆ ತಿಳಿದುಬರುವದು. ಯಾಕೆಂದರೆ ಅವರ ಮಧ್ಯೆ ನನ್ನ ಪರಿಶುದ್ಧ ಸ್ಥಾನವನ್ನು ನಿರಂತರಕ್ಕೂ ಇರಿಸುವೆನು.’”


ಆತನು ಜೆರುಸಲೇಮನ್ನು ಹಕ್ಕಿಯು ತನ್ನ ಗೂಡಿನ ಸುತ್ತಲೂ ಹಾರಾಡುತ್ತಾ ಕಾಪಾಡುವಂತೆ ಸಂರಕ್ಷಿಸುವನು. ಯೆಹೋವನು ಜೆರುಸಲೇಮನ್ನು ರಕ್ಷಿಸುವನು. ಯೆಹೋವನು “ಹಾದುಹೋಗಿ” ಜೆರುಸಲೇಮನ್ನು ರಕ್ಷಿಸುವನು.


“ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ನನ್ನ ಈ ಪ್ರಾರ್ಥನೆಯನ್ನು ಮತ್ತು ನಾನು ಕೇಳಿಕೊಂಡವುಗಳನ್ನು ನಮ್ಮ ದೇವರಾದ ಯೆಹೋವನು ಸದಾ ಜ್ಞಾಪಿಸಿಕೊಳ್ಳಲಿ. ಯೆಹೋವನು ತನ್ನ ಸೇವಕನಾದ ರಾಜನಿಗೋಸ್ಕರವಾಗಿಯೂ ತನ್ನ ಜನರಾದ ಇಸ್ರೇಲರಿಗೋಸ್ಕರವಾಗಿಯೂ ಇವುಗಳನ್ನು ಈ ಹೊತ್ತೇ ನೆರವೇರಿಸಲಿ.


“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು