ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.
ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.
ನಾನು ಅವರಿಗೆ ‘ಸಮಾಧಾನ’ ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು.” ಇದು ಯೆಹೋವನ ನುಡಿ.
ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.
ಗಿಲ್ಗಾಲಿನ ಪಾಳೆಯದಲ್ಲಿದ್ದ ಯೆಹೋಶುವನಿಗೆ ಗಿಬ್ಯೋನ್ ನಗರದ ಜನರು ಒಂದು ಸಂದೇಶವನ್ನು ಕಳಿಸಿದರು. ಆ ಸಂದೇಶ ಹೀಗಿತ್ತು: “ನಾವು ನಿಮ್ಮ ಸೇವಕರಾಗಿದ್ದೇವೆ, ನಮ್ಮನ್ನು ನಿಸ್ಸಹಾಯಕರಾಗಿ ಬಿಡಬೇಡಿರಿ. ಬಂದು ನಮಗೆ ಸಹಾಯ ಮಾಡಿರಿ; ತ್ವರೆಮಾಡಿರಿ; ನಮ್ಮನ್ನು ಉಳಿಸಿರಿ. ಬೆಟ್ಟಪ್ರದೇಶದ ಅಮೋರಿಯರ ಅರಸರೆಲ್ಲಾ ತಮ್ಮ ಸೈನ್ಯವನ್ನು ಒಟ್ಟುಗೂಡಿಸಿ ನಮ್ಮ ವಿರುದ್ಧ ಯುದ್ಧಮಾಡುತ್ತಿದ್ದಾರೆ.”
ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.
ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.
“ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.
ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”