Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:7 - ಪರಿಶುದ್ದ ಬೈಬಲ್‌

7 ಯೆಹೋವನು ತನ್ನ ಜನರನ್ನು ಹೇಗೆ ಶಿಕ್ಷಿಸುವನು? ಹಿಂದಿನ ಕಾಲದಲ್ಲಿ ಶತ್ರುಗಳು ಜನರನ್ನು ಗಾಯಪಡಿಸಿದರು. ಯೆಹೋವನೂ ಹಾಗೆ ಮಾಡುವನೇ? ಹಿಂದಿನ ಕಾಲದಲ್ಲಿ ಅನೇಕ ಮಂದಿ ಕೊಲ್ಲಲ್ಪಟ್ಟರು. ಹಾಗೆಯೇ ಯೆಹೋವನು ಜನರನ್ನು ಕೊಲ್ಲುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ತಮ್ಮ ಪ್ರಜೆಯ ಘಾತುಕರನ್ನು ದಂಡಿಸಿದಷ್ಟು ತಮ್ಮ ಪ್ರಜೆಯನ್ನು ದಂಡಿಸಲಿಲ್ಲ. ಘಾತುಕರಿಗಾದ ಪ್ರಾಣನಷ್ಟ ತಮ್ಮ ಪ್ರಜೆಗೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ತನ್ನ ಪ್ರಜೆಯ ಘಾತಕರನ್ನು ಹೊಡೆದಂತೆ ಆ ತನ್ನ ಪ್ರಜೆಯನ್ನು ಹೊಡೆದನೋ? ಅವರಿಗಾದಂಥ ಸಂಹಾರವು ಆ ಪ್ರಜೆಗೆ ಆಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಕೆಯನ್ನು ಹೊಡೆದವರನ್ನು ಆತನು ಹೊಡೆದಂತೆ ಯೆಹೋವ ದೇವರು ಆಕೆಯನ್ನು ಹೊಡೆದರೋ? ಆಕೆಯನ್ನು ಕೊಂದವರು ಹತರಾದಂತೆ ಆಕೆಯು ಸಂಹಾರವಾದಳೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:7
17 ತಿಳಿವುಗಳ ಹೋಲಿಕೆ  

ನಿನೆವೆಯೇ, ನೀನು ತೀವ್ರವಾದ ಗಾಯಹೊಂದಿರುವೆ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು.


ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ, “ನಿನ್ನ ಹೆಸರನ್ನು ಧರಿಸುವ ಸಂತತಿಯವರು ಯಾರೂ ಇರುವುದಿಲ್ಲ. ನಿನ್ನ ಕೆತ್ತನೆಯ ವಿಗ್ರಹಗಳನ್ನು ನಾನು ನಾಶಮಾಡುವೆನು. ನಿನ್ನ ದೇವರುಗಳ ಆಲಯದಲ್ಲಿರುವ ಲೋಹದ ಬೊಂಬೆಗಳನ್ನು ಕೆಡವಿಬಿಡುವೆನು. ನಿನ್ನ ಅಂತ್ಯವು ಬೇಗನೆ ಬರಲಿರುವುದರಿಂದ ನಿನಗೆ ಸಮಾಧಿಯನ್ನು ತಯಾರುಮಾಡುತ್ತಿದ್ದೇನೆ.”


ಆದರೆ ನಾನು ಬಾಬಿಲೋನಿಗೆ ಮುಯ್ಯಿತೀರಿಸುವೆನು. ನಾನು ಬಾಬಿಲೋನಿನ ಎಲ್ಲಾ ಜನರಿಗೆ ಮುಯ್ಯಿತೀರಿಸುವೆನು. ಅವರು ಚೀಯೋನಿಗೆ ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಮುಯ್ಯಿತೀರಿಸುವೆನು. ಯೆಹೂದವೇ, ನಿನ್ನ ಎದುರಿನಲ್ಲಿಯೇ ಅವರಿಗೆ ಮುಯ್ಯಿತೀರಿಸುವೆನು.” ಇದು ಯೆಹೋವನ ನುಡಿ.


ದೇವರು ಸೊದೋಮ್ ಗೊಮೋರ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದನು. ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಅದೇ ರೀತಿ ಬಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. ವಾಸಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.”


ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.


ಕೋಟೆಗೋಡೆಯುಳ್ಳ ಎಫ್ರಾಯೀಮನ ಪಟ್ಟಣಗಳು ನಾಶವಾಗುವವು. ದಮಸ್ಕದಲ್ಲಿರುವ ಸರ್ಕಾರವು ಕೊನೆಗೊಳ್ಳುವದು. ಇಸ್ರೇಲರಿಗೆ ಆದಂತೆಯೇ ಅರಾಮ್ಯರಿಗೂ ಆಗುವದು. ಪ್ರಮುಖ ನಗರವಾಸಿಗಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು” ಇದು ಸರ್ವಶಕ್ತನಾದ ಯೆಹೋವನ ನುಡಿ.


ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಕೃತ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.


ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು.


ಯೆಹೋವನ ಸ್ವರವನ್ನು ಕೇಳುವಾಗ ಅಶ್ಶೂರವು ನಡುಗುವದು. ಆತನು ಕೋಲಿನಿಂದ ಅಶ್ಶೂರವನ್ನು ಹೊಡೆಯುವನು.


ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.


ಅವರ ಸುರಕ್ಷತೆಯ ಸ್ಥಳ ನಾಶವಾಗುವದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತುಹೋಗುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ಅಗ್ನಿವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು ಜೆರುಸಲೇಮಿನಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು