ಯೆಶಾಯ 27:8 - ಪರಿಶುದ್ದ ಬೈಬಲ್8 ಯೆಹೋವನು ತನ್ನ ಜನರನ್ನು ದೂರದೇಶಕ್ಕೆ ಕಳುಹಿಸುವದರ ಮೂಲಕ ಅವರನ್ನು ಶಿಕ್ಷಿಸುವನು. ಇಸ್ರೇಲರೊಂದಿಗೆ ಯೆಹೋವನು ಕಟುವಾಗಿ ಮಾತನಾಡುವನು. ಆತನ ಮಾತುಗಳು ಮರುಭೂಮಿಯ ಬಿಸಿಗಾಳಿಯಂತೆ ಸುಡುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.