Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:9 - ಪರಿಶುದ್ದ ಬೈಬಲ್‌

9 ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:9
36 ತಿಳಿವುಗಳ ಹೋಲಿಕೆ  

ನಾನು ಆ ಜನರ ಪಾಪಗಳನ್ನು ಪರಿಹರಿಸುವಾಗ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.”


“ಇಗೋ, ನಾನು ನಿಮ್ಮನ್ನು ಶುದ್ಧೀಕರಿಸುತ್ತೇನೆ. ಜನರು ಬೆಳ್ಳಿಯನ್ನು ಬೆಂಕಿಯಿಂದ ಶುದ್ಧೀಕರಿಸುತ್ತಾರೆ. ಆದರೆ ನಾನು ನಿಮ್ಮನ್ನು ಸಂಕಟಗಳಿಂದ ಶುದ್ಧೀಕರಿಸುವೆನು.


ಜ್ಞಾನಿಗಳಾದ ಕೆಲವು ಯೆಹೂದ್ಯರು ತಪ್ಪುಗಳನ್ನು ಮಾಡಿ ಬಿದ್ದುಹೋಗುವರು. ಆದರೆ ಹಿಂಸೆ ನಡೆಯಬೇಕು. ಏಕೆಂದರೆ ಅಂತ್ಯಕಾಲ ಬರುವವರೆಗೆ ಅವರು ದೃಢಚಿತ್ತರೂ ಶುದ್ಧರೂ ನಿಷ್ಕಳಂಕರೂ ಆಗಬೇಕು. ಸರಿಯಾದ ಸಮಯಕ್ಕೆ ಅಂತ್ಯಕಾಲ ಬರುವದು.


ಜನರು ತಮ್ಮ ಮಹಾಕಾರ್ಯಗಳ ಮೇಲೆ ನಂಬಿಕೆ ಇಡುವದಿಲ್ಲ. ಸುಳ್ಳುದೇವರುಗಳಿಗೆ, ತಾವು ಮಾಡಿದ ಬಲಿಪೀಠಗಳಿಗೆ, ಪೂಜಾಸ್ಥಳಗಳಿಗೆ ಅವರು ಹೋಗುವದಿಲ್ಲ.


ಪ್ರಭುವು ತಾನು ಪ್ರೀತಿಸುವವನನ್ನೇ ದಂಡಿಸುತ್ತಾನೆ; ಯಾರನ್ನು ಮಗನೆಂದು ಒಪ್ಪಿಕೊಳ್ಳುವನೋ ಅವನನ್ನು ದಂಡಿಸುತ್ತಾನೆ.”


ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.


“ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”


ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನ್ನು ಅವರ ಸ್ವದೇಶದಿಂದ ತೆಗೆದುಬಿಡುವೆನು. ಅವರು ಇನ್ನೆಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಬರುವುದೇ ಇಲ್ಲ. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.”


ನನ್ನ ಜನರು ಹಿಂದಕ್ಕೆ ಬಂದಾಗ ದೇಶದಲ್ಲಿರುವ ಎಲ್ಲಾ ಹೊಲಸು ವಿಗ್ರಹಗಳನ್ನು ತೆಗೆದುಹಾಕುವರು.


ಚೀಯೋನಿನ ಸ್ತ್ರೀಯರ ಕಲ್ಮಷವನ್ನು ಯೆಹೋವನು ತೊಳೆದುಬಿಡುವನು. ಆತನು ಜೆರುಸಲೇಮಿನ ಮಧ್ಯದಲ್ಲಿರುವ ರಕ್ತವನ್ನು ತೊಳೆದುಬಿಡುವನು. ಆತನು ನ್ಯಾಯನೀತಿಗಳಿಂದ ತೀರ್ಪುನೀಡುವನು; ದಹಿಸುವ ಆತ್ಮನಿಂದ ಎಲ್ಲವನ್ನು ಶುದ್ಧಗೊಳಿಸುವನು.


ಮುಂದಿನ ದಿವಸಗಳಲ್ಲಿ ಜನರು ತಾವು ಆರಾಧಿಸಲು ಆರಿಸಿಕೊಳ್ಳುವ ಓಕ್ ಮರಗಳಲ್ಲಿಯೂ ವಿಶೇಷವಾದ ಉದ್ಯಾನವನಗಳಲ್ಲಿಯೂ ನಾಚಿಕೆಪಡುವರು.


ದಂಡನೆಯು ತಪ್ಪನ್ನು ನಿಲ್ಲಿಸುತ್ತದೆ; ನೋವು ವ್ಯಕ್ತಿಯನ್ನು ಬದಲಾಯಿಸುತ್ತದೆ.


ನಿನ್ನ ಕಟ್ಟಳೆಗಳನ್ನು ಕಲಿಯಲು ನಾನು ಪಟ್ಟ ಪ್ರಯಾಸವು ಒಳ್ಳೆಯದಾಯಿತು.


ನಾನು ಸಂಕಟಪಡುವುದಕ್ಕಿಂತ ಮೊದಲು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದೆ; ಈಗಲಾದರೋ ನಾನು ನಿನ್ನ ಆಜ್ಞೆಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು.


ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;


ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು.


ಯೆಹೂದ ದೇಶದ ಪಟ್ಟಣಗಳಲ್ಲಿದ್ದ ಎಲ್ಲಾ ವಿಗ್ರಹಗಳನ್ನೂ ಪೂಜಾಸ್ಥಳಗಳನ್ನೂ ಕಿತ್ತುಹಾಕಿಸಿದನು. ಆತನ ಆಳ್ವಿಕೆಯಲ್ಲಿ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.


ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.


ಅವರ ವೇದಿಕೆಗಳನ್ನು ನಾಶಮಾಡಿರಿ. ಅವರು ಪೂಜಿಸುವ ಕಲ್ಲುಗಳನ್ನು ಒಡೆದು ಹಾಕಿರಿ. ಅವರ ವಿಗ್ರಹಗಳನ್ನು ಕಡಿದು ಹಾಕಿರಿ.


ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆ. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.


ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು.


ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕಸ್ತಂಭಗಳನ್ನು ಚೂರುಚೂರು ಮಾಡಿದರು.


ನಿಮ್ಮ ಯಜ್ಞವೇದಿಕೆಗಳು ನಾಶವಾಗುವವು. ನಿಮ್ಮ ಧೂಪವೇದಿಕೆಗಳು ಕೆಡವಲ್ಪಡುವವು. ನಿಮ್ಮ ಹೆಣಗಳನ್ನು ನಿಮ್ಮ ಹೊಲಸು ವಿಗ್ರಹಗಳ ಮುಂದೆ ಬಿಸಾಡುವೆನು.


ರಾಜನಾದ ಯೋಷೀಯನು ಎಲ್ಲಾ ಸ್ಮಾರಕಕಲ್ಲುಗಳನ್ನು ಮತ್ತು ಅಶೇರಸ್ತಂಭಗಳನ್ನು ಒಡೆದು ಹಾಕಿಸಿದನು. ಆಮೇಲೆ ಅವನು ಆ ಸ್ಥಳದ ಮೇಲೆ ಸತ್ತವರ ಎಲುಬುಗಳನ್ನು ಹರಡಿದನು.


ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.


ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”


ನಿನ್ನ ದೇಶದಲ್ಲಿರುವ ಪಟ್ಟಣಗಳನ್ನು ಹಾಳುಮಾಡುವೆನು. ನಿನ್ನ ಕೋಟೆಗಳನ್ನೆಲ್ಲಾ ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು