Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:1 - ಪರಿಶುದ್ದ ಬೈಬಲ್‌

1 ಸಮಾರ್ಯದ ಕಡೆಗೆ ನೋಡು! ಎಫ್ರಾಯೀಮಿನ ಮತ್ತರಾದ ಜನರು ಆ ಪಟ್ಟಣದ ಬಗ್ಗೆ ಬಹಳ ಅಭಿಮಾನಪಡುತ್ತಿದ್ದಾರೆ. ಆ ನಗರವು ಪರ್ವತದ ಮೇಲಿರುವುದು; ಅದರ ಸುತ್ತಲೂ ಫಲವತ್ತಾದ ಕಣಿವೆ ಇರುವುದು. ಸಮಾರ್ಯದ ಜನರು ತಮ್ಮ ನಗರವು ಸುಂದರವಾದ ಕಿರೀಟವೆಂದು ನೆನಸುತ್ತಾರೆ. ಆದರೆ ಅವರು ಕುಡಿದು ಮತ್ತರಾಗಿದ್ದಾರೆ. ಅವರ “ಸುಂದರ ಕಿರೀಟವು” ಒಣಗಿದ ತರಗೆಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:1
28 ತಿಳಿವುಗಳ ಹೋಲಿಕೆ  

ನಮ್ಮ ಅರಸನ ದಿವಸದಲ್ಲಿ ನಾಯಕರು ಅತಿಯಾಗಿ ಕುಡಿದು ರೋಗಗ್ರಸ್ತರಾಗುವರು. ಅವರು ದ್ರಾಕ್ಷಾರಸದಿಂದ ಅಮಲೇರಿದವರಾಗಿ ದೇವರನ್ನು ಅಪಹಾಸ್ಯಮಾಡುವ ಜನರೊಂದಿಗೆ ಒಪ್ಪಂದ ಮಾಡಿಕೊಳ್ಳುವರು.


ಆದರೆ ಈಗ ಆ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಾಧೀಶರು ತೀರ್ಪುಕೊಡುವಾಗ ಅಮಲೇರಿದವರಾಗಿರುತ್ತಾರೆ.


ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ.


ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.


“ಆದರೆ ನೀವು ನಾಜೀರರನ್ನು ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ.


ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತುಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರು ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡುಕೊಂಡು ದೇವರ ಆಲಯದಲ್ಲಿ ಕುಡಿಯುವರು.


ಇಸ್ರೇಲ್ ಜನಾಂಗದಲ್ಲಿ ಅತೀ ಭಯಂಕರ ಸಂಗತಿಗಳನ್ನು ನಾನು ನೋಡಿರುತ್ತೇನೆ. ಎಫ್ರಾಯೀಮು ದೇವರಿಗೆ ದ್ರೋಹಿಯಾದನು. ಇಸ್ರೇಲು ಪಾಪದಿಂದ ಹೊಲಸಾಗಿದೆ.


ಇಸ್ರೇಲಿನ ಹೆಮ್ಮೆಯು ಅವರಿಗೆ ವಿರುದ್ಧವಾಗಿ ಸಾಕ್ಷಿನೀಡುತ್ತದೆ. ಇಸ್ರೇಲ್ ಮತ್ತು ಎಫ್ರಾಯೀಮ್ ತಮ್ಮ ಪಾಪಗಳಿಂದಲೇ ಮುಗ್ಗರಿಸುವರು. ಯೆಹೂದವೂ ಅವರೊಂದಿಗೆಯೇ ಮುಗ್ಗರಿಸುವದು.


“ಲೈಂಗಿಕಪಾಪ, ಗಡುಸಾದ ಮದ್ಯ ಮತ್ತು ಹೊಸ ದ್ರಾಕ್ಷಾರಸ ಇವುಗಳಿಂದ ವಿಚಾರಪ್ರಜ್ಞೆಯನ್ನು ಕಳೆದುಕೊಳ್ಳುವರು.


ಆಗ ಎಫ್ರಾಯೀಮಿನಲ್ಲಿರುವ (ಇಸ್ರೇಲಿನಲ್ಲಿರುವ) ಪ್ರತಿಯೊಬ್ಬನೂ, ಸಮಾರ್ಯದ ನಾಯಕರೂ, ದೇವರು ತಮ್ಮನ್ನು ಶಿಕ್ಷಿಸಿದ್ದಾನೆಂದು ತಿಳಿದುಕೊಳ್ಳುವರು. ಅವರು ಬಹು ಗರ್ವಿಷ್ಠರಾಗಿ ಹೆಚ್ಚಳಪಡುತ್ತಿದ್ದಾರೆ. ಅವರು ಹೇಳುವುದೇನೆಂದರೆ,


ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.


ಅವರು ಮದ್ಯವನ್ನು ಬೆರೆಸುವುದರಲ್ಲಿ ಪರಿಣಿತರು; ಮದ್ಯಸೇವನೆ ಮಾಡುವದಕ್ಕೆ ಹೆಸರಾದವರು.


ನೀವು ಮುಂಜಾನೆ ಎದ್ದು ಮದ್ಯಕ್ಕಾಗಿ ಹುಡುಕಾಡುವಿರಿ. ಮಧ್ಯರಾತ್ರಿಯವರೆಗೆ ಎಚ್ಚರವಿದ್ದು ಕುಡಿದು ಮತ್ತರಾಗುವಿರಿ.


ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ?


ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ನಿಮ್ಮ ಗರ್ವಕ್ಕೆ ಕಾರಣವಾದ ಬಲಿಷ್ಠವಾದ ಪಟ್ಟಣಗಳನ್ನು ನಾಶಮಾಡುವೆ. ಆಕಾಶವು ಮಳೆಗರೆಯುವುದಿಲ್ಲ. ಭೂಮಿಯು ಬೆಳೆಯನ್ನು ಫಲಿಸುವುದಿಲ್ಲ.


ಶಿಕ್ಷೆಯು ವಿಧಿಸಲ್ಪಡುವಾಗ ಎಫ್ರಾಯೀಮ್ ಬರಿದಾಗುವದು. ಇದು ಖಂಡಿತವಾಗಿಯೂ ನೆರವೇರುವದೆಂದು ಯೆಹೋವನಾದ ನಾನು ಇಸ್ರೇಲ್ ಕುಟುಂಬಗಳಿಗೆ ತಿಳಿಸುತ್ತಿದ್ದೇನೆ.


ಯಾಕೋಬನ ಜನರಿಗೆ, ನನ್ನ ದೇವರಾದ ಯೆಹೋವನು ಆಜ್ಞೆಯನ್ನು ಕೊಟ್ಟಿದ್ದಾನೆ. ಇಸ್ರೇಲರಿಗೆ ವಿರುದ್ಧವಾಗಿರುವ ಈ ಆಜ್ಞೆಯು ನೆರವೇರಲ್ಪಡುವುದು.


ಹೀಗೆ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಯುದ್ಧ ಮಾಡುವವರನ್ನು ಕಂಡುಹಿಡಿಯುವನು. ಯೆಹೋವನು ರೆಚೀನನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸುವನು.


ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


ಆದರೆ ಈಗ ನೀವು ಸುಖದ ಜೀವಿತದಲ್ಲಿ ಆನಂದಿಸುತ್ತಿದ್ದೀರಿ, ದಂತದ ಮಂಚದಲ್ಲಿ ಮಲಗುವಿರಿ; ಸುಖಾಸನಗಳ ಮೇಲೆ ಬಿದ್ದುಕೊಳ್ಳುವಿರಿ. ಹಿಂಡಿನಿಂದ ಎಳೇ ಕುರಿಮರಿಯನ್ನೂ ಹಟ್ಟಿಯಿಂದ ಎಳೇ ಕರುವನ್ನೂ ಭಕ್ಷಿಸುತ್ತೀರಿ.


ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು