Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:17 - ಪರಿಶುದ್ದ ಬೈಬಲ್‌

17 “ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ನ್ಯಾಯವನ್ನು ನೂಲನ್ನಾಗಿಯೂ ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಅಸತ್ಯದ ಆಶ್ರಯವನ್ನು ಬಡಿದುಕೊಂಡು ಹೋಗುವದು, ಜಲಪ್ರವಾಹವು [ಮೋಸದ] ಮರೆಯನ್ನು ಮುಣುಗಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:17
35 ತಿಳಿವುಗಳ ಹೋಲಿಕೆ  

ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರೆಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ.


ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.


ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ಅಪರಾಧಗಳನ್ನು ಮಾಡುವ ಜನರಿಗೆ ದೇವರು ತೀರ್ಪು ಮಾಡುತ್ತಾನೆ. ಆತನ ತೀರ್ಪು ನ್ಯಾಯವಾದುದೆಂದು ನಮಗೆ ಗೊತ್ತಿದೆ.


ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.


ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶದೊಳಗೆ ಆಲಿಕಲ್ಲಿನ ಮಳೆಯಿಂದ ಕೂಡಿದ ಬಿರುಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿಬರುವಂತೆಯೂ ಅವನು ಬರುವನು. ಆ ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು.


ಆತನ ತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ನಮ್ಮ ದೇವರು ವೇಶ್ಯೆಯನ್ನು ದಂಡಿಸಿದನು. ಅವಳ ಲೈಂಗಿಕ ಪಾಪದಿಂದಲೇ ಲೋಕವು ಕೆಟ್ಟುಹೋಯಿತು. ಆತನು ತನ್ನ ಸೇವಕರ ರಕ್ತಕ್ಕೆ ಪ್ರತಿಯಾಗಿ ಆ ವೇಶ್ಯೆಯನ್ನು ದಂಡಿಸಿದನು.”


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ರಕ್ತದಲ್ಲಿ ಕಲಸಿದ್ದ ಆಲಿಕಲ್ಲುಗಳ ಮತ್ತು ಬೆಂಕಿಯ ಮಳೆಯು ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರನೆಯ ಒಂದು ಭಾಗ ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋದವು; ಮತ್ತು ಮರಗಳಲ್ಲಿ ಮೂರನೆಯ ಒಂದು ಭಾಗ ಸುಟ್ಟುಹೋದವು.


ಹೌದು, ಪ್ರಭುವು ಭೂಮಿಯ ಮೇಲಿನ ಜನರಿಗೆ ಬಹುಬೇಗನೆ ತೀರ್ಪನ್ನು ಪೂರ್ಣವಾಗಿ ತೀರಿಸುವನು.”


ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”


ಅವನು ದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯಗಳನ್ನು ಸೋಲಿಸುತ್ತಾನೆ. ಅವನು ಒಪ್ಪಂದ ಮಾಡಿಕೊಂಡ ನಾಯಕನಿಗೂ ಮೋಸಮಾಡುತ್ತಾನೆ.


ನಾನು ಗೋಗನನ್ನು ರೋಗಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಬಂದ ಬಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಬೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.


ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


ಆತನ ಶ್ವಾಸವು (ಆತ್ಮ) ಒಂದು ಮಹಾನದಿಯಂತಿರುವದು. ಅದರ ನೀರು ಕುತ್ತಿಗೆಯ ತನಕ ಏರುವದು. ಯೆಹೋವನು ಜನಾಂಗಗಳಿಗೆ ನ್ಯಾಯತೀರಿಸುವನು. ಅವುಗಳನ್ನು ಜರಡಿಯಿಂದ ಜಾಲಾಡಿಸುವನು. ಯೆಹೋವನು ಅವುಗಳನ್ನು ನಿಯಂತ್ರಿಸುವನು. ಅದು ಪ್ರಾಣಿಗಳನ್ನು ನಿಯಂತ್ರಿಸುವ ಬಾಯಿಯಲ್ಲಿ ಹಾಕುವ ಕಡಿವಾಣದಂತಿರುವದು.


ನೀವು, “ನಾವು ಮರಣದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ಪಾತಾಳದೊಂದಿಗೆ ಒಪ್ಪಂದ ಮಾಡಿದ್ದೇವೆ. ಆದ್ದರಿಂದ ನಾವು ಶಿಕ್ಷಿಸಲ್ಪಡುವದಿಲ್ಲ. ಶಿಕ್ಷೆಯು ಹಾದುಹೋಗುವಾಗ ಅದು ನಮಗೇನೂ ಹಾನಿ ಮಾಡುವದಿಲ್ಲ. ನಾವು ನಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತೇವೆ” ಎಂದು ಹೇಳುತ್ತೀರಿ.


ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.


ನಿನ್ನ ಜನರು ಸಮುದ್ರದ ಮರಳಿನಂತೆ ಬಹಳವಿರುವರು. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಆ ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಆ ಬಳಿಕ ದೇವರ ಒಳ್ಳೆತನವು ಆ ದೇಶಕ್ಕೆ ಬರುವದು. ಅದು ದಡತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು.


ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು.


ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು.


ಆ ದುಷ್ಟರಿಗೆ ಅಕಾಲಮರಣವು ಬಂದಿತು. ಪ್ರವಾಹದಲ್ಲಿನ ಕಟ್ಟಡದಂತೆ ಅವರು ಕೊಚ್ಚಿಕೊಂಡು ಹೋದರು.


ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.


ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.


ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.


ಆದರೆ ಆತನು ತನ್ನ ವೈರಿಗಳನ್ನು ಪೂರ್ತಿಯಾಗಿ ನಾಶಮಾಡುತ್ತಾನೆ. ತೆರೆಯಂತೆ ಅವರನ್ನು ಕೊಚ್ಚಿಕೊಂಡು ಹೋಗುತ್ತಾನೆ. ಕತ್ತಲೆಯ ಕಡೆಗೆ ವೈರಿಗಳನ್ನು ಅಟ್ಟಿಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು