ಯೆಶಾಯ 28:27 - ಪರಿಶುದ್ದ ಬೈಬಲ್27 ವ್ಯವಸಾಯಗಾರನು ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ. ಜೀರಿಗೆಯನ್ನು ಕುದುರೆಯಿಂದ ಗುಂಡನ್ನು ಉರುಳಿಸಿ ನುಚ್ಚುನೂರು ಮಾಡುವನೋ? ಇಲ್ಲ! ಅವನೊಂದು ಸಣ್ಣ ಕೋಲನ್ನು ಉಪಯೋಗಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸದಾಪನ್ನು ಒಕ್ಕುವುದು ಕಣದ ಗುಂಡಿನಿಂದಲ್ಲ, ದೊಣ್ಣೆಯಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದಕಾರಣ ಅವನು ಕರಿಯ ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ; ಜೀರಿಗೆಯನ್ನು ಒಕ್ಕುವದು ಕಣದ ಗುಂಡಿನಿಂದಲ್ಲ, ದೊಣ್ಣೆಯಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವುದಿಲ್ಲ. ಜೀರಿಗೆಯನ್ನು ಒಕ್ಕುವುದು ಬಂಡಿಯ ಚಕ್ರ ತಿರುಗಿಸುವುದರಿಂದ ಅಲ್ಲ. ಅಗಸೆಯು ಕೋಲಿನಿಂದಲೂ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದ ಆಗಿರುತ್ತದೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.