ಯೆಶಾಯ 28:3 - ಪರಿಶುದ್ದ ಬೈಬಲ್3 ಕುಡಿದು ಮತ್ತರಾದ ಎಫ್ರಾಯೀಮ್ಯರಿಗೆ ಸುಂದರವಾದ ಕಿರೀಟದ ಮೇಲೆ ಹೆಚ್ಚಳ. ಆದರೆ ಆ ನಗರವು ತುಳಿಯಲ್ಪಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎಫ್ರಯಿಮಿನ ಕುಡುಕರ ಮಹಾಮುಕುಟದಂತಿರುವ ಆ ನಗರ ಕಾಲಿನ ತುಳಿತಕ್ಕೆ ಈಡಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕುಡುಕರಾದ ಎಫ್ರಾಯೀಮ್ಯರ ಗರ್ವದ ಕಿರೀಟವು ಕಾಲಿನ ತುಳಿತಕ್ಕೆ ಈಡಾಗುವುದು. ಅಧ್ಯಾಯವನ್ನು ನೋಡಿ |
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.