Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:6 - ಪರಿಶುದ್ದ ಬೈಬಲ್‌

6 ಆತನ ಜನರನ್ನು ಆಳುವ ನ್ಯಾಯಾಧಿಪತಿಗಳಿಗೆ ಯೆಹೋವನು ಜ್ಞಾನವನ್ನು ಕೊಡುವನು. ಪುರದ್ವಾರದಲ್ಲಿ ಯುದ್ಧಮಾಡುವ ಆತನ ಜನರಿಗೆ ಯೆಹೋವನು ಬಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯನ್ನೂ ಊರಬಾಗಿಲ ಬಳಿ ಶತ್ರುಗಳನ್ನು ತಡೆಗಟ್ಟುವವರಿಗೆ ಶೌರ್ಯವನ್ನೂ ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ ಊರಬಾಗಿಲಲ್ಲಿ ಶತ್ರುಗಳನ್ನು ತಳ್ಳಿಬಿಡುವವರಿಗೆ ಶೌರ್ಯವಾಗಿಯೂ ಪರಿಣವಿುಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:6
22 ತಿಳಿವುಗಳ ಹೋಲಿಕೆ  

“ನಾನು ಒಬ್ಬಂಟಿಗನಾಗಿ ಏನೂ ಮಾಡಲಾರೆನು. ನಾನು ಕೇಳಿದ್ದಕ್ಕನುಸಾರವಾಗಿ ತೀರ್ಪು ಮಾಡುತ್ತೇನೆ. ಆದ್ದರಿಂದ ನನ್ನ ತೀರ್ಪು ಸರಿಯಾದದ್ದು. ಏಕೆಂದರೆ, ನಾನು ನನ್ನನ್ನು ಮೆಚ್ಚಿಸಲು ಪ್ರಯತ್ನಿಸದೆ ನನ್ನ ತಂದೆಯನ್ನು ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.


ರಾಜನು ನ್ಯಾಯತೀರ್ಪು ಮಾಡುವಾಗ ತನ್ನ ಕಣ್ಣುಗಳಿಂದ ದುಷ್ಟತನವನ್ನು ಶೋಧಿಸುವನು.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಅಶ್ಶೂರದ ರಾಜನ ಬಳಿಯಲ್ಲಿ ಮನುಷ್ಯರು ಮಾತ್ರ ಇರುವರು. ಆದರೆ ನಮ್ಮೊಂದಿಗೆ ದೇವರಾದ ಯೆಹೋವನಿದ್ದಾನೆ. ನಮ್ಮ ದೇವರು ನಮಗೆ ಸಹಾಯ ಮಾಡುತ್ತಾನೆ. ನಮ್ಮ ಯುದ್ಧದಲ್ಲಿ ಆತನು ನಮಗೋಸ್ಕರ ಕಾದಾಡುವನು” ಎಂದು ಹೇಳಿ ಹಿಜ್ಕೀಯ ಅರಸನು ತನ್ನ ಜನರನ್ನು ಪ್ರೋತ್ಸಾಹಿಸಿ ಬಲಗೊಳಿಸಿದನು.


ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗುವನು. ವೈರಿಗಳೊಂದಿಗೆ ಯುದ್ಧಮಾಡಲು ಆತನು ನಿಮಗೆ ಸಹಾಯ ಮಾಡುವನು ಮತ್ತು ನಿಮಗೆ ಜಯವನ್ನು ಕೊಡುವನು.’


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಹಿಜ್ಕೀಯನು ಸೈನಿಕರಿಗೆಲ್ಲಾ ದಳಪತಿಗಳನ್ನು ನೇಮಿಸಿದನು. ಜೆರುಸಲೇಮಿನ ನಗರದ ಹೆಬ್ಬಾಗಿಲ ಬಳಿಯಲ್ಲಿದ್ದ ಮೈದಾನದಲ್ಲಿ ಹಿಜ್ಕೀಯನು ಸೇನಾಪತಿಗಳೊಂದಿಗೆ ಸಮಾಲೋಚನೆ ನಡಿಸಿದನು; ಅವರನ್ನು ಪ್ರೋತ್ಸಾಹಿಸಿ ಹುರಿದುಂಬಿಸಿದನು. “ಧೈರ್ಯಶಾಲಿಗಳಾಗಿರಿ, ಬಲಗೊಳ್ಳಿರಿ, ಅಶ್ಶೂರದ ಅರಸನಿಗಾಗಲಿ ಅರಸನೊಂದಿಗಿರುವ ಆ ದೊಡ್ಡ ಸೈನ್ಯಕ್ಕಾಗಲಿ ಭಯಪಡಬೇಡಿರಿ. ಅವನಿಗಿಂತಲೂ ಹೆಚ್ಚಾದ ಸಾಮರ್ಥ್ಯ ನಮಗಿದೆ.


ಚೀಯೋನಿನ ಸ್ತ್ರೀಯರ ಕಲ್ಮಷವನ್ನು ಯೆಹೋವನು ತೊಳೆದುಬಿಡುವನು. ಆತನು ಜೆರುಸಲೇಮಿನ ಮಧ್ಯದಲ್ಲಿರುವ ರಕ್ತವನ್ನು ತೊಳೆದುಬಿಡುವನು. ಆತನು ನ್ಯಾಯನೀತಿಗಳಿಂದ ತೀರ್ಪುನೀಡುವನು; ದಹಿಸುವ ಆತ್ಮನಿಂದ ಎಲ್ಲವನ್ನು ಶುದ್ಧಗೊಳಿಸುವನು.


ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.


ಯೆಹೋವನೇ ಉನ್ನತೋನ್ನತನು. ಆತನು ಬಹು ಉನ್ನತವಾದ ಸ್ಥಳದಲ್ಲಿ ವಾಸಿಸುತ್ತಾನೆ. ಆತನು ಚೀಯೋನನ್ನು ನ್ಯಾಯನೀತಿಗಳಿಂದ ತುಂಬಿಸುವನು.


ಯೆಹೂದದ ಪ್ರಧಾನರು ತಮ್ಮ ಜನರನ್ನು ಹುರಿದುಂಬಿಸುವರು. ‘ಸೇವಾಧೀಶ್ವರನಾದ ಯೆಹೋವನು ನಿಮ್ಮ ದೇವರು. ಆತನೇ ನಮಗೆ ಬಲವನ್ನು ಕೊಡುವಾತನು’ ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು