ಯೆಶಾಯ 29:1 - ಪರಿಶುದ್ದ ಬೈಬಲ್1 ದೇವರು ಹೇಳುವುದೇನೆಂದರೆ, “ಅರೀಯೇಲನ್ನು ನೋಡು. ಅಲ್ಲಿ ದಾವೀದನು ಪಾಳೆಯಮಾಡಿಕೊಂಡಿದ್ದನು. ಆಕೆಯ ಹಬ್ಬಗಳು ಪ್ರತಿ ವರ್ಷವೂ ನಡೆಯುತ್ತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಯ್ಯೋ, ಅರೀಯೇಲೇ, ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರೀಯೇಲೇ, ಅರೀಯೇಲೇ, ದಾವೀದನು ದಂಡಿಳಿದ ಪಟ್ಟಣವೇ, ನಿನಗೆ ಧಿಕ್ಕಾರ ! ಒಂದೆರಡು ವರ್ಷ ತುಂಬಲಿ. ಹಬ್ಬಹುಣ್ಣಿಮೆಗಳು ಕಳೆಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ಸೈನ್ಯಸಮೇತನಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರುಷಕ್ಕೆ ಮುಂದಿನ ವರುಷವನ್ನು ಸೇರಿಸಿರಿ; ಹಬ್ಬಗಳು ಸುತ್ತಿಬರಲಿ; ಆಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಿಚಾಟ ಕಿರಿಚಾಟವಾಗುವದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ವಾಸಿಸಿದ ಪಟ್ಟಣವೇ! ವರುಷಕ್ಕೆ ವರುಷವನ್ನು ಕೂಡಿಸಿರಿ. ನಿಮ್ಮ ಹಬ್ಬಗಳ ಚಕ್ರ ಮುಂದುವರಿಯಲಿ. ಅಧ್ಯಾಯವನ್ನು ನೋಡಿ |
ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.