ಯೆಶಾಯ 29:10 - ಪರಿಶುದ್ದ ಬೈಬಲ್10 ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಮುಚ್ಚಿ ದಿವ್ಯದರ್ಶಿಗಳೆಂಬ ತಲೆಗಳಿಗೆ ಮುಸುಕು ಹಾಕಿದ್ದಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ. ಅಧ್ಯಾಯವನ್ನು ನೋಡಿ |
ಅಂತೆಯೇ, ಸೌಲನ ತಲೆಯ ಹತ್ತಿರವಿದ್ದ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ದಾವೀದನು ತೆಗೆದುಕೊಂಡನು. ನಂತರ ದಾವೀದ ಮತ್ತು ಅಬೀಷೈ ಸೌಲನ ಪಾಳೆಯನ್ನು ಬಿಟ್ಟು ಹೋದರು. ಇದನ್ನು ಯಾರೂ ನೋಡಲಿಲ್ಲ. ಇದರ ಬಗ್ಗೆ ಯಾರಿಗೂ ತಿಳಿಯಲಿಲ್ಲ. ಒಬ್ಬನಾದರೂ ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ! ಸೌಲನು ಮತ್ತು ಅವನ ಸೈನಿಕರೆಲ್ಲರೂ ನಿದ್ರಿಸುತ್ತಿದ್ದರು. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು.