Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:11 - ಪರಿಶುದ್ದ ಬೈಬಲ್‌

11 ನಾನು ಖಂಡಿತವಾಗಿ ಹೇಳುತ್ತೇನೆ, ಈ ಸಂಗತಿಗಳು ನೆರವೇರುವವು. ಆದರೆ ನೀವು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ನನ್ನ ಮಾತುಗಳು ಒಂದು ಪುಸ್ತಕದಲ್ಲಿ ಬರೆದು ಮುಚ್ಚಿ ಅದಕ್ಕೆ ಮುದ್ರೆಹಾಕಿ ಇರಿಸಿದಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ಕಾರಣ, ನಿನ್ನ ಕುರಿತ ದಿವ್ಯದರ್ಶನ ನಿಗೂಢ ಗ್ರಂಥವಾಕ್ಯವಾಗಿಬಿಟ್ಟಿದೆ. ಅದನ್ನು ಅಕ್ಷರಬಲ್ಲವನಿಗೆ, “ದಯಮಾಡಿ ಇದನ್ನು ಓದು,” ಎಂದು ಕೊಟ್ಟರೆ, ಅವನು : “ಇದು ನಿಗೂಢವಾಗಿದೆ, ಆಗುವುದಿಲ್ಲ,” ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರಬಲ್ಲವನಿಗೆ - ದಯಮಾಡಿ ಓದೆಂದು ಒಪ್ಪಿಸಿದರೆ ಅವನು - ಮುದ್ರೆಹಾಕಿದೆಯಲ್ಲಾ, ಆಗುವದಿಲ್ಲ ಅನ್ನುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿದ ಗ್ರಂಥದ ವಾಕ್ಯಗಳ ಹಾಗಾಯಿತು. ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು, “ಇದನ್ನು ಓದು,” ಎಂದು ವಿನಂತಿಸಿದರೆ ಅವನು, “ಮುದ್ರೆ ಹಾಕಿದೆಯೆಲ್ಲಾ, ಆಗುವುದಿಲ್ಲ,” ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:11
11 ತಿಳಿವುಗಳ ಹೋಲಿಕೆ  

ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


“ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.”


ಯೆಹೋವನು, “ಒಡಂಬಡಿಕೆ ಮಾಡಿಕೊಂಡು ಅದಕ್ಕೆ ಮುದ್ರೆಹಾಕು. ಮುಂದಿನ ಪೀಳಿಗೆಗಾಗಿ ನನ್ನ ಬೋಧನೆಯನ್ನು ಜೋಪಾನವಾಗಿರಿಸು. ನನ್ನ ಹಿಂಬಾಲಕರ ಕಣ್ಣೆದುರಿನಲ್ಲೇ ಹೀಗೆ ಮಾಡು” ಎಂದು ಹೇಳಿದನು.


ಅದಕ್ಕೆ ಆತನು, “ದಾನಿಯೇಲನೇ, ನಿನ್ನ ಜೀವನ ಸಾಗಲಿ. ಈ ಸಂದೇಶವು ರಹಸ್ಯವಾದದ್ದು. ಅಂತ್ಯಕಾಲ ಬರುವವರೆಗೆ ಇದು ರಹಸ್ಯವಾಗಿ ಉಳಿಯುವದು.


ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ನಂತರ ಕುರಿಮರಿಯು ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ಗಮನಿಸಿದೆನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತೆ ಮಾತನಾಡುವುದನ್ನು ನಾನು ಕೇಳಿದೆನು. ಅದು “ಬಾ!” ಎಂದು ಹೇಳಿತು.


ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.


ಆದರೆ ಈಗ ಆ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಾಧೀಶರು ತೀರ್ಪುಕೊಡುವಾಗ ಅಮಲೇರಿದವರಾಗಿರುತ್ತಾರೆ.


ಓದುಬರುವವನಿಗೆ ಇದನ್ನು ಓದು ಎಂದು ಹೇಳಿದರೆ ಅವನು, “ಈ ಪುಸ್ತಕ ಮುಚ್ಚಲ್ಪಟ್ಟಿದೆ, ನನಗೆ ತೆರೆಯಲು ಸಾಧ್ಯವಿಲ್ಲ” ಎಂದು ಹೇಳುವನು. ಓದುಬಾರದ ಒಬ್ಬನಿಗೆ ಕೊಟ್ಟರೆ ಅವನು, “ನನಗೆ ಓದಲು ಬರುವದಿಲ್ಲ” ಎಂದು ಹೇಳಿ ಪುಸ್ತಕವನ್ನು ಹಿಂದಕ್ಕೆ ಕೊಡುವನು.


ಪುಸ್ತಕದಲ್ಲಿರುವ ಮಾತುಗಳನ್ನು ಕಿವುಡನು ಕೇಳಿಸಿಕೊಳ್ಳುವನು. ಕುರುಡನು ಕತ್ತಲೆಯಲ್ಲಿಯೂ ಮಂಜು ತುಂಬಿದ್ದಾಗಲೂ ನೋಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು