Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:15 - ಪರಿಶುದ್ದ ಬೈಬಲ್‌

15 ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಜುವದಕ್ಕೆ ಅಗಾಧೋಪಾಯ ಮಾಡಿ ನಮ್ಮನ್ನು ಯಾರು ನೋಡಿಯಾರು, ಯಾರು ತಿಳಿದಾರು ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡಿಸುವವರ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ, ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು? ಎಂದುಕೊಂಡು, ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸುವವರಿಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:15
30 ತಿಳಿವುಗಳ ಹೋಲಿಕೆ  

ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.


ನೀನು ದುಷ್ಕೃತ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತಳಾಗಿದ್ದೇನೆ ಎಂದುಕೊಂಡಿರುವೆ. ‘ನಾನು ಮಾಡಿದ ದುಷ್ಕೃತ್ಯಗಳನ್ನು ಯಾರೂ ನೋಡುವದಿಲ್ಲ’ ಎಂದು ನೀನು ಭಾವಿಸಿಕೊಂಡಿರುವೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ಕಾಪಾಡುತ್ತವೆ ಎಂದು ತಿಳಿದುಕೊಂಡಿರುವೆ. ‘ನಾನೇ ಮಹಾವ್ಯಕ್ತಿ, ನನ್ನಂಥ ಮಹಾವ್ಯಕ್ತಿ ಬೇರೆ ಯಾರೂ ಇಲ್ಲ’ ಎಂದು ನೀನು ಅಂದುಕೊಳ್ಳುವೆ.


ಯೆಹೋವನು ಹೀಗೆನ್ನುತ್ತಾನೆ: “ಈ ಮಕ್ಕಳನ್ನು ನೋಡಿರಿ, ಅವರು ನನಗೆ ವಿಧೇಯರಾಗುತ್ತಿಲ್ಲ. ಅವರು ಯೋಜನೆಗಳನ್ನು ತಯಾರಿಸುತ್ತಾರೆ, ಆದರೆ ನನ್ನಿಂದ ಸಹಾಯವನ್ನು ಕೇಳುತ್ತಿಲ್ಲ. ಅವರು ಬೇರೆ ರಾಜ್ಯಗಳೊಂದಿಗೆ ಒಪ್ಪಂದ ಮಾಡುತ್ತಾರೆ; ಆದರೆ ನನ್ನ ಆತ್ಮವು ಅದಕ್ಕೆ ಒಪ್ಪುತ್ತಿಲ್ಲ. ಈ ಜನರು ತಮ್ಮ ಪಾಪಗಳಿಗೆ ಇನ್ನೂ ಹೆಚ್ಚು ಪಾಪವನ್ನು ಕೂಡಿಸಿಟ್ಟುಕೊಳ್ಳುತ್ತಾರೆ.


ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.


“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.


ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ನೀವು, “ನಾವು ಮರಣದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ಪಾತಾಳದೊಂದಿಗೆ ಒಪ್ಪಂದ ಮಾಡಿದ್ದೇವೆ. ಆದ್ದರಿಂದ ನಾವು ಶಿಕ್ಷಿಸಲ್ಪಡುವದಿಲ್ಲ. ಶಿಕ್ಷೆಯು ಹಾದುಹೋಗುವಾಗ ಅದು ನಮಗೇನೂ ಹಾನಿ ಮಾಡುವದಿಲ್ಲ. ನಾವು ನಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತೇವೆ” ಎಂದು ಹೇಳುತ್ತೀರಿ.


ತಮ್ಮ ನಾಲಿಗೆಗಳೇ ಆಯುಧಗಳೆಂಬಂತೆ ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ.


ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.


ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ನೀವು ಮಾಡುವ ಧಾರ್ಮಿಕ ಕಾರ್ಯಗಳನ್ನೂ ನಿಮ್ಮ ಒಳ್ಳೆತನವನ್ನೂ ನಾನು ಹೇಳಿದರೂ ಅವುಗಳೆಲ್ಲಾ ನಿಷ್ಪ್ರಯೋಜಕವಾದವುಗಳು.


“ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!” ಎಂದು ಆ ದುಷ್ಟರು ಹೇಳಿಕೊಳ್ಳುವರು.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ಆ ತೀರ್ಪು ಏನೆಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಕೃತ್ಯಗಳನ್ನು ಮಾಡುತ್ತಿದ್ದರು.


“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.


ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ. ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ.


ಆಗ ದೇವರು ನನಗೆ, “ನರಪುತ್ರನೇ, ಗೋಡೆಯ ರಂಧ್ರವನ್ನು ಅಗೆದು ದೊಡ್ಡದನ್ನಾಗಿ ಮಾಡು” ಎಂದು ಹೇಳಿದನು. ನಾನು ಗೋಡೆಯನ್ನು ಅಗೆದೆನು. ಆಗ ಬಾಗಿಲೊಂದು ನನಗೆ ಕಾಣಿಸಿತು.


ನೀವು ಅನೇಕಾನೇಕ ಕೆಟ್ಟ ಸಂಗತಿಗಳನ್ನು ಮಾಡಿದ್ದೀರಿ. ಆದ್ದರಿಂದ ನಿಮ್ಮೆಲ್ಲರನ್ನು ನಾನು ಶಿಕ್ಷಿಸುತ್ತೇನೆ.


ಅವಳು ತನ್ನ ಶೋಕಕಾಲವನ್ನು ಮುಗಿಸಿದ ನಂತರ, ಅವಳನ್ನು ತನ್ನ ಮನೆಗೆ ಕರೆತರಲು ದಾವೀದನು ಸೇವಕರನ್ನು ಕಳುಹಿಸಿದನು. ಅವಳು ದಾವೀದನ ಪತ್ನಿಯಾದಳು. ಅವಳು ದಾವೀದನಿಂದ ಒಂದು ಗಂಡುಮಗುವಿಗೆ ಜನ್ಮನೀಡಿದಳು. ದಾವೀದನು ಮಾಡಿದ ಈ ಕೆಟ್ಟಕಾರ್ಯವು ಯೆಹೋವನಿಗೆ ದುಃಖವನ್ನುಂಟುಮಾಡಿತು.


ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ರಹಸ್ಯವಾದ ಕೆಟ್ಟಕಾರ್ಯಗಳನ್ನು ಮಾಡಿದರು. ಇಸ್ರೇಲರು ಚಿಕ್ಕ ಊರಿನಿಂದಿಡಿದು ದೊಡ್ಡ ನಗರದವರೆಗೂ ತಮ್ಮ ಎಲ್ಲಾ ನಗರಗಳಲ್ಲಿ ಉನ್ನತಸ್ಥಳಗಳನ್ನು ನಿರ್ಮಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು