ಯೆಶಾಯ 29:18 - ಪರಿಶುದ್ದ ಬೈಬಲ್18 ಪುಸ್ತಕದಲ್ಲಿರುವ ಮಾತುಗಳನ್ನು ಕಿವುಡನು ಕೇಳಿಸಿಕೊಳ್ಳುವನು. ಕುರುಡನು ಕತ್ತಲೆಯಲ್ಲಿಯೂ ಮಂಜು ತುಂಬಿದ್ದಾಗಲೂ ನೋಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು, ಮೊಬ್ಬುಕತ್ತಲುಗಳಲ್ಲಿಯೂ ಕುರುಡರ ಕಣ್ಣು ಕಾಣುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ, ಅಂಧಕಾರದೊಳಗಿಂದಲೂ ಕಾಣುವುವು. ಅಧ್ಯಾಯವನ್ನು ನೋಡಿ |
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.