ಯೆಶಾಯ 29:19 - ಪರಿಶುದ್ದ ಬೈಬಲ್19 ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ದೀನರು ಯೆಹೋವನಲ್ಲಿ ಹೆಚ್ಚುಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲ್ಯರ ಸದಮಲಸ್ವಾವಿುಯಲ್ಲಿ ಉಲ್ಲಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು. ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸುವರು. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.