ಯೆಶಾಯ 29:20 - ಪರಿಶುದ್ದ ಬೈಬಲ್20 ಇದು ಕ್ರೂರಿಗಳೂ ದುಷ್ಟರೂ ನಾಶವಾದಾಗ ಆಗುವದು. ಕೆಟ್ಟಕಾರ್ಯಗಳನ್ನು ಮಾಡುವದರಲ್ಲಿ ಸಂತೋಷಿಸುವವರು ಇಲ್ಲದೆ ಹೋದಾಗ ಆ ಕಾರ್ಯಗಳು ನಡಿಯುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಏಕೆಂದರೆ ಭಯೋತ್ಪಾದಕರು ನಿಶ್ಶೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಏಕಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಭಯಂಕರನು ಇಲ್ಲವಾಗುತ್ತಾನೆ. ಅಪಹಾಸ್ಯ ಮಾಡುವವರು ಕಣ್ಮರೆಯಾಗುತ್ತಾರೆ. ಕೇಡಿಗೆ ಕಾಯುವವರೆಲ್ಲರೂ ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿ |
“ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.
ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.