ಯೆಶಾಯ 29:21 - ಪರಿಶುದ್ದ ಬೈಬಲ್21 (ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅಪಸಾಕ್ಷಿಯಿಂದ ತಪ್ಪು ಹೊರಿಸುವವರೂ ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ ನ್ಯಾಯವಂತನ ನ್ಯಾಯವನ್ನು ಸುಮ್ಮಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲಾ ನಿರ್ಮೂಲರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಅವರು ಅವನಿಗೆ, “ಷಿಬ್ಬೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಆ ಪದವನ್ನು ಸರಿಯಾಗಿ ಉಚ್ಚರಿಸಲು ಬರುತ್ತಿರಲಿಲ್ಲ. ಅವರು ಆ ಪದವನ್ನು “ಸಿಬ್ಬೋಲೆತ್” ಎಂದು ಉಚ್ಚರಿಸುತ್ತಿದ್ದರು. ಆ ಮನುಷ್ಯನು “ಸಿಬ್ಬೋಲೆತ್” ಅಂದತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ದಾರಿಯ ತಿರುವುಗಳಲ್ಲೇ ಕೊಂದುಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು.
ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.