“ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.
“ಯೆಹೋವನು ಅಶ್ಶೂರದ ರಾಜನನ್ನು ಕುರಿತು ಹೀಗೆನ್ನುತ್ತಾನೆ: ‘ಅವನು ಈ ನಗರದೊಳಕ್ಕೆ ಬರುವುದಿಲ್ಲ. ಅವನು ಈ ನಗರದಲ್ಲಿ ಒಂದು ಬಾಣವನ್ನೂ ಎಸೆಯುವುದಿಲ್ಲ. ಅವನು ಈ ನಗರದ ವಿರುದ್ಧ ಗುರಾಣಿಗಳೊಂದಿಗೆ ಬರುವುದಿಲ್ಲ. ಅವನು ಈ ನಗರವನ್ನು ಮುತ್ತಲು ಮಣ್ಣಿನ ದಿಬ್ಬವನ್ನು ನಿರ್ಮಿಸುವುದಿಲ್ಲ.
ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)
ಹಣ್ಣುಗಳನ್ನು ಕೊಡದ ಮರಗಳನ್ನು ಕಡಿಯಬಹುದು. ಆ ಮರಗಳಿಂದ ಆಯುಧಗಳನ್ನು ತಯಾರಿಸಿ ಆ ಪಟ್ಟಣದ ಜನರೊಂದಿಗೆ ಯುದ್ಧ ಮಾಡಬಹುದು. ಆ ಪಟ್ಟಣವು ನಿಮ್ಮ ಕೈವಶವಾಗುವ ತನಕ ನೀವು ಅದನ್ನು ಉಪಯೋಗಿಸಬಹುದು.