4 ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು, ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.
4 ನೀನು ಕುಗ್ಗಿ ಭೂಮಿಯೊಳಗಿಂದ ಮಾತಾಡುವೆ. ನಿನ್ನ ನುಡಿ ಮಣ್ಣಿನೊಳಗಿಂದ ಶಿಥಿಲ ಸ್ವರವಾಗಿ ಹೊರಡುವುದು. ನಿನ್ನ ಧ್ವನಿ ಭೂತದ ಧ್ವನಿಯಂತೆ ನೆಲದೊಳಗಿಂದ ಬರುವುದು. ಧೂಳಿನೊಳಗಿಂದ ನಿನ್ನ ಮಾತು ಲೊಚಗುಟ್ಟುವಂತೆ ಕೇಳಿಸುವುದು.
4 ಆಗ ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ. ನಿನ್ನ ನುಡಿಯು ಧೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು. ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರುವುದು. ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”
ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.
ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”
ನಿನ್ನ ಧೂಳನ್ನು ಝಾಡಿಸು. ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೊ. ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೊ.