ಯೆಶಾಯ 29:5 - ಪರಿಶುದ್ದ ಬೈಬಲ್5 ನೆಲದ ಮೇಲೆ ಅನೇಕ ಅಪರಿಚಿತರು ಧೂಳಿನ ಕಣಗಳಂತೆ ಇದ್ದಾರೆ. ಅನೇಕ ಮಂದಿ ದುಷ್ಟಜನರು ಗಾಳಿಯಲ್ಲಿ ತೂರಿಹೋಗುವ ಹೊಟ್ಟಿನಂತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಗುಂಪುಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮ ದೂಳಿಯಂತೆಯೂ ತಂಡೋಪತಂಡವಾಗಿ ಬಂದಿರುವ ಭಯಂಕರರು ಹಾರಿಹೋಗುವ ಹೊಟ್ಟಿನ ಹಾಗೂ ಆಗುವರು; ತಟ್ಟನೆ ಕ್ಷಣದಲ್ಲಿ ಲಯಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು. ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರುವುದು. ಹೌದು, ಅದು ಕ್ಷಣಮಾತ್ರದಲ್ಲಿ ಫಕ್ಕನೆ ಆಗುವುದು. ಅಧ್ಯಾಯವನ್ನು ನೋಡಿ |
ವೈರಿಯು ಆರ್ಭಟಿಸುತ್ತಾ ಗದ್ದಲ ಮಾಡುತ್ತಾನೆ. ಆ ಭಯಂಕರ ಶತ್ರುವು ಯುದ್ಧಕ್ಕೆ ಬಾ ಎಂದು ಸವಾಲು ಹಾಕುತ್ತಾನೆ. ಆದರೆ ದೇವರೇ, ನೀನು ಅವನನ್ನು ತಡೆಯುವೆ. ಬೇಸಿಗೆ ಕಾಲದಲ್ಲಿ ಮರುಭೂಮಿಯಲ್ಲಿರುವ ಸಸಿಗಳು ಬಾಡಿಹೋಗಿ ನೆಲದ ಮೇಲೆ ಬಿದ್ದುಹೋಗುವವು. ಅದೇ ರೀತಿಯಲ್ಲಿ ನೀನು ವೈರಿಯನ್ನು ಸೋಲಿಸಿ ಅವನು ಮೊಣಕಾಲೂರುವಂತೆ ಮಾಡುವೆ. ಕಾರ್ಮುಗಿಲು ಬೇಸಿಗೆಯ ತಾಪವನ್ನು ನಿವಾರಿಸುವದು. ಅದೇ ರೀತಿಯಲ್ಲಿ ನೀನು ಶತ್ರುವಿನ ಆರ್ಭಟವನ್ನು ನಿಲ್ಲಿಸುವೆ.
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.