Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:9 - ಪರಿಶುದ್ದ ಬೈಬಲ್‌

9 ಆಶ್ಚರ್ಯಪಡಿರಿ! ಬೆರಗಾಗಿರಿ! ನೀವು ಮತ್ತರಾಗಿರುವಿರಿ! ಆದರೆ ದ್ರಾಕ್ಷಾರಸದಿಂದಲ್ಲ. ನೋಡಿ, ಆಶ್ಚರ್ಯಪಡಿರಿ! ನೀವು ಮುಗ್ಗರಿಸಿಬೀಳುವಿರಿ, ಆದರೆ ಮದ್ಯಪಾನದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ಬೆರಗಾಗಿರಿ, ಕುರುಡುಮಾಡಿಕೊಂಡು ಕುರುಡರಾಗಿರಿ; ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ, ಮದ್ಯದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತಾಮಸ ಮಾಡಿ ಆಶ್ಚರ್ಯಪಡಿರಿ. ಕುರುಡು ಮಾಡಿಕೊಂಡು ದೃಷ್ಟಿಯಿಲ್ಲದವರಾಗಿರಿ ಇವರು ಅಮಲೇರಿದ್ದಾರೆ. ಆದರೆ ದ್ರಾಕ್ಷಾರಸದಿಂದಲ್ಲ. ಅವರು ಕೂಗಾಡುತ್ತಾರೆ, ಆದರೆ ಮದ್ಯದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:9
25 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.


ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ಯೆಹೋವನು ಆ ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ.


ಯೇಸು ಮೂರನೆಯ ಸಾರಿ ಪ್ರಾರ್ಥಿಸಿದ ಮೇಲೆ, ತನ್ನ ಶಿಷ್ಯರ ಬಳಿಗೆ ಹಿಂತಿರುಗಿ, “ನೀವು ಇನ್ನೂ ನಿದ್ರಿಸುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಗಳ ಕೈಗೆ ಮನುಷ್ಯಕುಮಾರನನ್ನು ಒಪ್ಪಿಸುವ ಸಮಯ ಬಂದಿದೆ.


ಬಳಿಕ ಯೇಸು ತನ್ನ ಶಿಷ್ಯರ ಬಳಿಗೆ ಹಿಂದಿರುಗಿ, “ನೀವು ಇನ್ನೂ ನಿದ್ರೆ ಮಾಡುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಷ್ಠರಾದ ಜನರಿಗೆ ಮನುಷ್ಯಕುಮಾರನನ್ನು ಒಪ್ಪಿಸುವ ಕಾಲ ಸಮೀಪಿಸಿದೆ.


ಯೆಹೋವನು ಉತ್ತರಿಸುತ್ತಾ, “ಇತರ ದೇಶಗಳನ್ನು ನೋಡು, ಅವರನ್ನು ಗಮನಿಸು. ನೀನು ಆಶ್ಚರ್ಯಪಡುವೆ. ನೀನು ನಿನ್ನ ಜೀವಮಾನದಲ್ಲಿಯೇ ಅಚ್ಚರಿಪಡುವಂಥ ವಿಷಯವನ್ನು ನಾನು ನಡಿಸುತ್ತೇನೆ. ನೀನು ಅದನ್ನು ನೋಡಿ ನಂಬುವೆ. ನಿನಗೆ ಅದರ ವಿಷಯವಾಗಿ ತಿಳಿಸಲ್ಪಟ್ಟರೂ ನೀನು ನಂಬುವದಿಲ್ಲ.


ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.


ಬಾಬಿಲೋನ್ ಯೆಹೋವನ ಕೈಯಲ್ಲಿನ ಬಂಗಾರದ ಪಾತ್ರೆಯಂತಿತ್ತು. ಲೋಕವೆಲ್ಲವೂ ಮದ್ಯಪಾನ ಮಾಡುವಂತೆ ಬಾಬಿಲೋನ್ ಮಾಡಿತು. ಜನಾಂಗಗಳು ಬಾಬಿಲೋನಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


“ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನ್ನ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನ್ನು ಕೊಲ್ಲಲು ಒಂದು ಖಡ್ಗವನ್ನು ಕಳುಹಿಸುತ್ತಿದ್ದೇನೆ.’


ಪ್ರವಾದಿಗಳಿಗೊಂದು ಸಂದೇಶ. ನಾನು ಬಹಳ ದುಃಖಿತನಾಗಿದ್ದೇನೆ. ನನ್ನ ಹೃದಯ ಒಡೆದುಹೋಗಿದೆ. ನನ್ನ ಎಲುಬುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ.


“ಆಕಾಶಮಂಡಲವೇ, ನಡೆದ ಸಂಗತಿಗಳಿಗಾಗಿ ಬೆಚ್ಚಿಬೆರಗಾಗು! ಭಯದಿಂದ ನಡುಗು!” ಎಂದು ಯೆಹೋವನು ನುಡಿಯುತ್ತಾನೆ.


ಜೆರುಸಲೇಮೇ, ಎಚ್ಚರಗೊಳ್ಳು; ಎದ್ದೇಳು; ಯೆಹೋವನು ನಿನ್ನ ಮೇಲೆ ಬಹಳವಾಗಿ ಕೋಪಗೊಂಡು ನಿನ್ನನ್ನು ಶಿಕ್ಷಿಸಿದ್ದಾನೆ. ಆ ಶಿಕ್ಷೆಯು ವಿಷತುಂಬಿದ ಪಾತ್ರೆಯಂತಿದೆ. ನೀನು ಅದನ್ನು ಕುಡಿಯಲೇಬೇಕಿತ್ತು. ಈಗ ನೀನು ಅದನ್ನು ಕುಡಿದಿರುವೆ.


ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ದೇವರು ಹೇಳುವುದೇನೆಂದರೆ, “ಅರೀಯೇಲನ್ನು ನೋಡು. ಅಲ್ಲಿ ದಾವೀದನು ಪಾಳೆಯಮಾಡಿಕೊಂಡಿದ್ದನು. ಆಕೆಯ ಹಬ್ಬಗಳು ಪ್ರತಿ ವರ್ಷವೂ ನಡೆಯುತ್ತಿವೆ.


ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.


ನಾನು ಕೋಪಗೊಂಡಾಗ ಜನಾಂಗಗಳ ಮೇಲೆ ತುಳಿದಾಡಿದೆನು. ನಾನು ಸಿಟ್ಟುಗೊಂಡಾಗ ಅವರನ್ನು ಶಿಕ್ಷಿಸಿದೆನು. ಅವರ ರಕ್ತವನ್ನು ನೆಲದ ಮೇಲೆ ಚೆಲ್ಲಿದೆನು.”


ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ರಾಜನು ಮತ್ತು ನಾಯಕರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಯಾಜಕರು ಭಯಪಡುವರು; ಪ್ರವಾದಿಗಳು ಬೆರಗಾಗುವರು.”


ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


ಆಗ ನೀನು ಅವರಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ ಎಂದು ಹೇಳು. ಈ ಪ್ರದೇಶದಲ್ಲಿ ವಾಸಮಾಡುವ ಪ್ರತಿಯೊಬ್ಬ ಮನುಷ್ಯನನ್ನು ಕುಡಿದು ಮತ್ತನಾದವನಂತೆ ಅಸಹಾಯಕನನ್ನಾಗಿ ಮಾಡುತ್ತೇನೆ. ನಾನು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ರಾಜರ ಬಗ್ಗೆ ಹೇಳುತ್ತಿದ್ದೇನೆ. ನಾನು ಯಾಜಕರ, ಪ್ರವಾದಿಗಳ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಎಲ್ಲಾ ಜನರ ಬಗ್ಗೆಯೂ ಹೇಳುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು