Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:12 - ಪರಿಶುದ್ದ ಬೈಬಲ್‌

12 ಮಕ್ಕಳು ನನ್ನ ಜನರನ್ನು ಸೋಲಿಸಿಬಿಡುವರು. ಸ್ತ್ರೀಯರು ನನ್ನ ಜನರನ್ನು ಆಳುವರು. ನನ್ನ ಜನರೇ, ನಿಮ್ಮ ಮಾರ್ಗದರ್ಶಕರು ನಿಮ್ಮನ್ನು ತಪ್ಪುದಾರಿಯಲ್ಲಿ ನಡಿಸುವರು; ಸರಿಯಾದ ದಾರಿಯಿಂದ ನಿಮ್ಮನ್ನು ಅಡ್ಡದಾರಿಗೆ ನಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಜನರನ್ನೋ ಬಾಧಿಸುವವರು ಹುಡುಗರು, ಆಳುವವರು ಹೆಂಗಸರು. ನನ್ನ ಜನರೇ! ನಿಮ್ಮನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರೆ, ನೀವು ನಡೆಯತಕ್ಕ ದಾರಿಯನ್ನು ಅಳಿಸಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:12
15 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ: “ನಾನು ಬಾಲಕರನ್ನು ನಿಮ್ಮ ನಾಯಕರನ್ನಾಗಿ ಮಾಡುವೆನು.


ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ನಾನು ತಪ್ಪಿಸಿಕೊಂಡು ಹೋಗುವ ದಾರಿಯನ್ನು ಆ ಯೌವನಸ್ಥರು ಕಾಯುತ್ತಿದ್ದಾರೆ. ನನ್ನನ್ನು ನಾಶಮಾಡುವುದರಲ್ಲಿ ಅವರು ಯಶಸ್ವಿಯಾಗುವರು. ಅವರಿಗೆ ವಿರುದ್ಧವಾಗಿ ನನಗೆ ಸಹಾಯಮಾಡಲು ಯಾರೂ ಇಲ್ಲ.


ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು.


ರಾಜನು ಮಗುವಿನಂತೆ ಇದ್ದರೆ ದೇಶವು ಹಾಳಾಗುವುದು. ಅಧಿಪತಿಗಳು ಮುಂಜಾನೆಯಲ್ಲಿಯೇ ಔತಣ ಮಾಡಿದರೆ ದೇಶವು ಹಾಳಾಗುವುದು.


ಯೆಹೋವನು ಆ ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ.


ನಿನ್ನ ದೇವರೂ ಒಡೆಯನೂ ಆಗಿರುವ ಯೆಹೋವನು ತನ್ನ ಜನರಿಗಾಗಿ ಯುದ್ಧ ಮಾಡುವನು. ಅವನು ನಿನಗೆ ಹೇಳುವುದೇನೆಂದರೆ, “ಇಗೋ, ನಾನು ನಿನ್ನಿಂದ ವಿಷದ ಪಾತ್ರೆಯನ್ನು (ಶಿಕ್ಷೆ) ತೆಗೆದುಬಿಡುತ್ತೇನೆ. ಇನ್ನು ಮುಂದೆ ನನ್ನ ಸಿಟ್ಟಿನಿಂದ ನೀನು ಶಿಕ್ಷಿಸಲ್ಪಡುವದಿಲ್ಲ.


ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು