ಯೆಶಾಯ 3:14 - ಪರಿಶುದ್ದ ಬೈಬಲ್14 ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ: “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ತನ್ನ ಜನರ ಹಿರಿಯರನ್ನೂ ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು; ನೀವು ದ್ರಾಕ್ಷೆಯ ತೋಟವನ್ನು ನುಂಗಿಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿಯೇ ಇದೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.