Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:17 - ಪರಿಶುದ್ದ ಬೈಬಲ್‌

17 ನನ್ನ ಒಡೆಯನಾದ ಯೆಹೋವನು ಚೀಯೋನಿನ ಸ್ತ್ರೀಯರ ತಲೆಯ ಮೇಲೆ ಹುಣ್ಣುಗಳನ್ನು ಬರಮಾಡಿ ಅವರ ತಲೆಕೂದಲು ಉದುರಿ ತಲೆಬೋಳಾಗುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಡೆಯರಾದ ಸ್ವಾಮಿ ಅವರ ನಡುನೆತ್ತಿಯನ್ನು ಹುಣ್ಣಾಗಿಸಿ ಬೋಳುಮಾಡುವರು. ಅವರ ಮಾನವನ್ನು ಬಯಲುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕರ್ತನಾದ ಯೆಹೋವನು ಅವರ ನಡುನೆತ್ತಿಯನ್ನು ಹುಣ್ಣಿನಿಂದ ಬಾಧಿಸಿ ಅವರ ಮಾನವನ್ನು ಬೈಲುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ಯೆಹೋವ ದೇವರು ಚೀಯೋನ್ ಪುತ್ರಿಯರ ನಡುನೆತ್ತಿಗೆ ಹುಣ್ಣನ್ನು ಅನುಮತಿಸಿ, ಅವರನ್ನು ಬೋಳುಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:17
15 ತಿಳಿವುಗಳ ಹೋಲಿಕೆ  

“ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನ್ನನ್ನು ನೀನೇ ಕೇಳಿಕೊಳ್ಳಬಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನ್ನ ಪಾಪಗಳ ಫಲವಾಗಿ ನಿನ್ನ ಲಂಗವನ್ನು ಹರಿಯಲಾಯಿತು. ನಿನ್ನ ಪಾದರಕ್ಷೆಯನ್ನು ಕಿತ್ತುಕೊಳ್ಳಲಾಯಿತು. ನಿನ್ನನ್ನು ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು.


ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.


ಶಾಫೀರ್‌ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್‌ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು.


ಅಶ್ಶೂರದ ಅರಸನು ಈಜಿಪ್ಟನ್ನೂ ಇಥಿಯೋಪ್ಯವನ್ನೂ ಸೋಲಿಸುವನು. ಅಶ್ಶೂರವು ಜನರನ್ನು ಸೆರೆಹಿಡಿದು ಅವರ ರಾಜ್ಯಗಳಿಂದ ಹೊರಗೆ ಕೊಂಡುಹೋಗುವದು. ವೃದ್ಧರೂ ಬಾಲಕರೂ ಬಟ್ಟೆಯಿಲ್ಲದೆಯೂ ಪಾದರಕ್ಷೆಗಳಿಲ್ಲದೆಯೂ ಇರುವರು. ಅವರು ಪೂರ್ಣ ಬೆತ್ತಲೆಯಾಗಿರುವರು. ಈಜಿಪ್ಟಿನ ಜನರು ನಾಚಿಕೆಗೆ ತುತ್ತಾಗುವರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮೇಲಂಗಿಯನ್ನು ನಿನ್ನ ಮುಖದ ತನಕ ಎತ್ತುವೆನು. ಜನಾಂಗಗಳು ನಿನ್ನ ಬೆತ್ತಲೆತನವನ್ನು ನೋಡಲಿ. ನಿನ್ನ ನಾಚಿಕೆಯನ್ನು ಅವರು ನೋಡಲಿ.


“ಈಜಿಪ್ಟಿನವರಿಗೆ ಕಳುಹಿಸಿದಂತೆ ನಿಮಗೂ ಮೈಯಲ್ಲಿ ಬಾಧಿಸುವ ಹುಣ್ಣುಗಳನ್ನು ಕಳುಹಿಸುವನು. ದೇಹದಲ್ಲಿ ಗಡ್ಡೆಗಳುಂಟಾಗುವವು. ಕೀವುಸೋರುವ ಹುಣ್ಣುಗಳು, ಗುಣವಾಗದ ತುರಿಸುವ ಕಜ್ಜಿಗಳು ಉಂಟಾಗುವವು.


ಗೂನು ಬೆನ್ನುಳ್ಳವರು, ದೇಹ ಬೆಳವಣಿಗೆ ನಿಂತುಹೋಗಿರುವವರು, ಕಣ್ಣು ದೋಷವುಳ್ಳವರು, ಕಜ್ಜಿತುರಿಗಳುಳ್ಳವರು ಅಥವಾ ಚರ್ಮರೋಗವುಳ್ಳವರು, ಬೀಜದೋಷವುಳ್ಳವರು.


ಚೀಯೋನಿನ ಸ್ತ್ರೀಯರೇ, ಹೊರಗೆ ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಲ್ಲಿ ಹೃದಯವು ಹರ್ಷಗೊಂಡಿದ್ದಾಗ ಅವನ ತಾಯಿ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.


ಯೆಹೋವನು ಹೇಳುವುದೇನೆಂದರೆ: “ಚೀಯೋನಿನ ಸ್ತ್ರೀಯರು ವಯ್ಯಾರದಿಂದ ತಲೆಯಾಡಿಸುತ್ತಾ, ಕುಡಿನೋಟ ಬೀರುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆಯನ್ನು ಝಣಝಣಿಸುತ್ತಾ ನಡೆಯುತ್ತಾರೆ.”


ಆ ಸಮಯದಲ್ಲಿ ಆತನು ಅವರ ಎಲ್ಲಾ ವಸ್ತುಗಳನ್ನು ಅವರಿಂದ ತೆಗೆದುಬಿಡುವನು. ಅವರ ಕಾಲುಸರಗಳನ್ನು, ಸೂರ್ಯಚಂದ್ರಾಕಾರದ ಕೊರಳಿನ ಸರಗಳನ್ನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು