Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:18 - ಪರಿಶುದ್ದ ಬೈಬಲ್‌

18 ಆ ಸಮಯದಲ್ಲಿ ಆತನು ಅವರ ಎಲ್ಲಾ ವಸ್ತುಗಳನ್ನು ಅವರಿಂದ ತೆಗೆದುಬಿಡುವನು. ಅವರ ಕಾಲುಸರಗಳನ್ನು, ಸೂರ್ಯಚಂದ್ರಾಕಾರದ ಕೊರಳಿನ ಸರಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದಿನ ಬರುವುದು, ಆಗ ಸ್ವಾಮಿ ಅವರ ಬೆಡಗಿನ ಆಭರಣಗಳೆಲ್ಲವನ್ನು ತೆಗೆದುಹಾಕುವರು. ಕಾಲಂದಿಗೆ, ತುರುಬು, ಬಲೆ, ಅರ್ಧಚಂದ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬು ಬಲೆ, ಅರ್ಧಚಂದ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿನದಲ್ಲಿ ಯೆಹೋವ ದೇವರು ಅವರ ಕಾಲಂದಿಗೆ, ತುರುಬು ಬಲೆ, ಅರ್ಧಚಂದ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:18
7 ತಿಳಿವುಗಳ ಹೋಲಿಕೆ  

ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ಆ ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಅರ್ಧಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ಈ ವಸ್ತ್ರಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು.


ತಲೆಕೂದಲನ್ನು ಸುಂದರವಾಗಿ ಬಾಚಿಕೊಳ್ಳುವುದಾಗಲಿ ಬಂಗಾರದ ಒಡವೆಗಳಾಗಲಿ ಒಳ್ಳೆಯ ಬಟ್ಟೆಗಳಾಗಲಿ ನಿಮ್ಮ ಸೌಂದರ್ಯದ ಸಾಧನಗಳಾಗದಿರಲಿ.


ನನ್ನ ಒಡೆಯನಾದ ಯೆಹೋವನು ಚೀಯೋನಿನ ಸ್ತ್ರೀಯರ ತಲೆಯ ಮೇಲೆ ಹುಣ್ಣುಗಳನ್ನು ಬರಮಾಡಿ ಅವರ ತಲೆಕೂದಲು ಉದುರಿ ತಲೆಬೋಳಾಗುವಂತೆ ಮಾಡುವನು.


ಕಿವಿಯೋಲೆಗಳನ್ನು, ಕೈಬಳೆಗಳನ್ನು, ಸೆರಗುವಸ್ತ್ರಗಳನ್ನು,


ನಿನ್ನಲ್ಲಿರುವ ಉತ್ಕೃಷ್ಟವಾದ ಬಟ್ಟೆ, ಆಭರಣಗಳನ್ನೆಲ್ಲಾ ಸುಲುಕೊಳ್ಳುವರು.


“ಅವರು ದೂರ ಪ್ರಾಂತ್ಯಗಳಿಂದ ಪುರುಷರನ್ನು ಕರಿಸಿದರು. ಅವರಿಗೆ ನೀನು ಸಂದೇಶ ಕಳುಹಿಸಿದೆ. ಅವರು ನಿನ್ನನ್ನು ನೋಡಲು ಬಂದರು. ಅವರಿಗಾಗಿ ನೀನು ಸ್ನಾನ ಮಾಡಿ, ನಿನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿ, ನಿನ್ನ ಆಭರಣಗಳನ್ನು ಧರಿಸಿಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು