Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:2 - ಪರಿಶುದ್ದ ಬೈಬಲ್‌

2 ಆತನು ಎಲ್ಲಾ ವೀರರನ್ನೂ ಮಹಾಸೈನಿಕರನ್ನೂ ತೆಗೆದುಬಿಡುವನು. ದೇವರು ಎಲ್ಲಾ ನ್ಯಾಯಾಧೀಶರನ್ನೂ ಪ್ರವಾದಿಗಳನ್ನೂ ಹಿರಿಯರನ್ನೂ ಇಂದ್ರಜಾಲಗಾರರನ್ನು ತೆಗೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಧೀರರು ಮತ್ತು ಯೋಧರು, ನ್ಯಾಯಾಧಿಪತಿಗಳು ಮತ್ತು ಪ್ರವಾದಿಗಳು, ಶಕುನದವರು ಮತ್ತು ಶಾಸಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಶೂರ, ಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ, ಪಂಚದಶಾಧಿಪತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವನು, ಹಿರಿಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:2
12 ತಿಳಿವುಗಳ ಹೋಲಿಕೆ  

ಹೀಗೆ ನಾನು ಮೋವಾಬಿನ ಅರಸರಿಗೆ ಅಂತ್ಯವನ್ನು ಮಾಡುವೆನು. ಮೋವಾಬಿನ ಎಲ್ಲಾ ನಾಯಕರುಗಳನ್ನು ಸಾಯಿಸುವೆನು” ಇದು ಯೆಹೋವನ ನುಡಿ.


ಯೆಹೂದದ ರಾಜನನ್ನಾಗಿ ಮಾಡುವುದಾಗಿ ನೆಬೂಕದ್ನೆಚ್ಚರನು ರಾಜನ ಕುಟುಂಬದವರಲ್ಲೊಬ್ಬನೊಡನೆ ಒಪ್ಪಂದಮಾಡಿಕೊಂಡು ತನಗೆ (ನೆಬೂಕದ್ನೆಚ್ಚರನಿಗೆ) ಆಧಿನವಾಗಿರುವದಾಗಿ ಅವನಿಂದ (ರಾಜನ ಕುಟುಂಬದವನಿಂದ) ಪ್ರಮಾಣ ಮಾಡಿಸಿಕೊಂಡನು. ಅವನು ಯೆಹೂದದ ಬಲಿಷ್ಠರೆಲ್ಲರನ್ನು ಸಹ ಈ ಒಪ್ಪಂದದಲ್ಲಿ ಸೇರಿಸಿದನು.


ಬಳಿಕ ದೇವರು ಅಲ್ಲಿದ್ದ ಉಳಿದವರಿಗೆ, “ಮೊದಲನೆಯವನನ್ನು ಹಿಂಬಾಲಿಸಿರಿ. ಹಣೆಗಳ ಮೇಲೆ ಗುರುತಿಲ್ಲದ ಜನರನ್ನು ಕೊಂದು ನಾಶಪಡಿಸಿರಿ. ಯಾವ ಮರುಕವನ್ನಾಗಲಿ ಕನಿಕರವನ್ನಾಗಲಿ ತೋರದೆ ವೃದ್ಧರನ್ನೂ ಯೌವನಸ್ಥರನ್ನೂ ಯುವತಿಯರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಕೊಲ್ಲಿರಿ. ಆದರೆ ಹಣೆಯ ಮೇಲೆ ಗುರುತು ಹೊಂದಿರುವ ಯಾರನ್ನೂ ಮುಟ್ಟಬೇಡಿ. ಇದನ್ನು ನನ್ನ ಆಲಯದಿಂದಲೇ ಆರಂಭಿಸಿ” ಎಂದು ಹೇಳಿದನು. ಆದ್ದರಿಂದ ಅವರು ಆಲಯದ ಮುಂದೆ ಇದ್ದ ಹಿರಿಯರನ್ನು ಕೊಲ್ಲುವುದರ ಮೂಲಕ ಈ ಕೆಲಸವನ್ನು ಆರಂಭಿಸಿದರು.


ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.


ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ.


ದೇವರು ಸೇನಾಪತಿಗಳನ್ನೂ ಸರ್ಕಾರದ ಅಧಿಪತಿಗಳನ್ನೂ ತೆಗೆದುಬಿಡುವನು. ಆತನು ಉತ್ತಮ ಸಲಹೆಗಾರರನ್ನೂ ಮಾಂತ್ರಿಕರನ್ನೂ ಭವಿಷ್ಯ ಹೇಳುವವರನ್ನೂ ತೊಲಗಿಸುವನು.


“ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು.


ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು