Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:26 - ಪರಿಶುದ್ದ ಬೈಬಲ್‌

26 ನಗರದ ಹೆಬ್ಬಾಗಿಲ ಬಳಿಯಲ್ಲಿ ಜನರು ಸೇರಿ ಬರುವಾಗ ರೋಧನವೂ ಶೋಕವೂ ಇರುತ್ತವೆ. ಇದ್ದುದನ್ನೆಲ್ಲಾ ಕಳೆದುಕೊಂಡ ಸ್ತ್ರೀಯಂತೆ ಜೆರುಸಲೇಮು ಸರ್ವವನ್ನೂ ಕಳೆದುಕೊಂಡು ನೆಲದ ಮೇಲೆ ಕುಳಿತು ರೋಧಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವಳ ಪುರದ್ವಾರಗಳಲ್ಲಿ ಪ್ರಲಾಪವೂ ದುಃಖವೂ ತುಂಬಿರುವವು; ಅವಳು ಹಾಳಾಗಿ ನೆಲದ ಮೇಲೆ ಕೂತುಬಿಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:26
19 ತಿಳಿವುಗಳ ಹೋಲಿಕೆ  

ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.


“ಯೆಹೂದ ಜನಾಂಗವು ಸತ್ತುಹೋದವರಿಗಾಗಿ ಗೋಳಾಡುವುದು. ಯೆಹೂದದ ನಗರಗಳಲ್ಲಿದ್ದ ಜನರು ದಿನೇದಿನೇ ನಿಬರ್ಲರಾಗುತ್ತಾರೆ. ಆ ಜನರು ನೆಲದ ಮೇಲೆ ಬಿದ್ದು ಬಿಡುತ್ತಾರೆ. ಜೆರುಸಲೇಮ್ ನಗರದಿಂದ ಜನರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಾರೆ.


ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. ಅವುಗಳು ದುಃಖಿಸುತ್ತಿವೆ; ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ. ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ. ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ.


ಬಳಿಕ ಆ ಮೂವರು ಸ್ನೇಹಿತರು ಏಳುದಿನ ಹಗಲಿರುಳು ಯೋಬನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಬನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ.


ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.


ಆಗ ಸಮುದ್ರ ತೀರದ ದೇಶಗಳ ನಾಯಕರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕವನ್ನು ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನ್ನು ತೆಗೆದಿಟ್ಟು ಭಯದ ಬಟ್ಟೆಗಳನ್ನು ಧರಿಸಿಕೊಂಡು ನೆಲದ ಮೇಲೆ ಭಯದಿಂದ ಕುಳಿತುಕೊಳ್ಳುವರು. ನೀನು ಎಷ್ಟು ಬೇಗನೇ ನಾಶವಾದೆ ಎಂದು ಕೇಳಿ ದಂಗುಬಡಿದಂತಾಗುವರು.


ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು.


“ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ ಕೆಳಕ್ಕಿಳಿದು ಧೂಳಿನ ಮೇಲೆ ಕುಳಿತಿಕೊ. ಕಸ್ದೀಯರ ಕುಮಾರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೊ! ಈಗ ನೀನು ಯಜಮಾನಿಯಲ್ಲ. ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ.


‘ನಾವು ನಿಮಗೋಸ್ಕರ ವಾದ್ಯ ಬಾರಿಸಿದೆವು. ನೀವು ಕುಣಿಯಲಿಲ್ಲ; ನಾವು ಶೋಕಗೀತೆ ಹಾಡಿದೆವು, ನೀವು ದುಃಖಿಸಲಿಲ್ಲ.’


ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.


ಮಹಾದ್ವಾರಗಳ ಬಳಿಯಲ್ಲಿರುವ ಜನರೇ, ಗೋಳಾಡಿರಿ! ಪಟ್ಟಣದೊಳಗಿರುವ ಜನರೇ, ಕೂಗಾಡಿರಿ! ಫಿಲಿಷ್ಟಿಯದಲ್ಲಿರುವವರೆಲ್ಲರೂ ಭಯಪಡುವರು. ನಿಮ್ಮ ಧೈರ್ಯವು ಮೇಣದಂತೆ ಕರಗಿಹೋಗುವದು. ಇಗೋ, ಉತ್ತರದಿಕ್ಕಿನಲ್ಲಿ ಧೂಳು ಏಳುತ್ತಿದೆ. ಅಶ್ಶೂರದ ಸೈನ್ಯವು ಬರುತ್ತಿದೆ. ಅವರೆಲ್ಲರೂ ಬಲಶಾಲಿಗಳಾದ ವೀರರು.


ನಾನು ಅರೀಯೇಲನ್ನು ಶಿಕ್ಷಿಸಿದ್ದೇನೆ. ಆ ನಗರವು ದುಃಖರೋಧನಗಳಿಂದ ತುಂಬಿದೆ. ಆದರೆ ಆಕೆ ಯಾವಾಗಲೂ ನನ್ನ ಅರೀಯೇಲಾಗಿದ್ದಾಳೆ.


ದೇಶವು ಅಸ್ವಸ್ಥತೆಯಿಂದ ಸಾಯುತ್ತಿದೆ. ಲೆಬನೋನ್ ನಾಚಿಗೊಂಡು ಒಣಗುತ್ತಿದೆ. ಶಾರೋನ್ ತಗ್ಗು ಒಣಗಿ ನಿರ್ಜನವಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಿಂದೆ ಬಹು ಅಂದವಾದ ಸಸಿಗಳನ್ನು ಬೆಳೆಯಿಸುತ್ತಿದ್ದವು. ಈಗ ಅವುಗಳು ಅಲ್ಲಿ ಬೆಳೆಯುವದಿಲ್ಲ.


ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.


ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.


ಯೆಹೋವನು ಚೀಯೋನ್ ಕುಮಾರಿಯ ಪೌಳಿಗೋಡೆಯನ್ನು ನಾಶಮಾಡಬೇಕೆಂದು ಯೋಚಿಸಿದ್ದಾನೆ. ಆತನು ಅಳತೆದಾರದಿಂದ ಒಡೆಯಬೇಕಾದ ಗೋಡೆಗೆ ಗುರುತು ಮಾಡಿದ್ದಾನೆ. ಆತನು ತಾನು ಮಾಡುತ್ತಿದ್ದ ನಾಶನವನ್ನು ನಿಲ್ಲಿಸಲಿಲ್ಲ. ಪೌಳಿಗೋಡೆಗಳು ಮತ್ತು ಗೋಪುರಗಳು ದುಃಖದಿಂದ ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಕುಸಿದುಹೋಗಿವೆ.


ಜನರು ವಾಸವಾಗಿರುವ ಪಟ್ಟಣಗಳು ನಾಶವಾಗುತ್ತವೆ; ಇಡೀ ದೇಶವೇ ನಾಶವಾಗುತ್ತದೆ. ನಾನೇ ಯೆಹೋವನೆಂದು ಆಗ ನಿಮಗೆ ತಿಳಿಯುವುದು.’”


ಸಮಾರ್ಯದ ಗಾಯವು ವಾಸಿಯಾಗದು. ಆಕೆಯ ರೋಗವು (ಪಾಪ) ಯೆಹೂದಕ್ಕೆ ಹಬ್ಬಿಯದೆ. ಅದು ನನ್ನ ಜನರ ಪಟ್ಟಣದ ಹೆಬ್ಬಾಗಿಲಿನವರೆಗೆ ಹೋಗಿದೆ. ಜೆರುಸಲೇಮಿನ ತನಕ ಪಸರಿಸಿಯದೆ.


ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು