Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:4 - ಪರಿಶುದ್ದ ಬೈಬಲ್‌

4 ಯೆಹೋವನು ಹೇಳುವುದೇನೆಂದರೆ: “ನಾನು ಬಾಲಕರನ್ನು ನಿಮ್ಮ ನಾಯಕರನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು, “ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಅವರಿಗೆ ಬಾಲಕರನ್ನು ಪಾಲಕರನ್ನಾಗಿಸಿ, ಹಸುಳೆಗಳು ಅವರನ್ನು ಆಳುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇವಿುಸುವೆನು, ಬಾಲಚೇಷ್ಟೆಯು ಅದನ್ನಾಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಬಾಲಕರನ್ನು ಅವರ ಪ್ರಭುಗಳನ್ನಾಗಿ ಮಾಡಿ, ಮಕ್ಕಳು ಅವರ ಮೇಲೆ ಆಳುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:4
12 ತಿಳಿವುಗಳ ಹೋಲಿಕೆ  

ರಾಜನು ಮಗುವಿನಂತೆ ಇದ್ದರೆ ದೇಶವು ಹಾಳಾಗುವುದು. ಅಧಿಪತಿಗಳು ಮುಂಜಾನೆಯಲ್ಲಿಯೇ ಔತಣ ಮಾಡಿದರೆ ದೇಶವು ಹಾಳಾಗುವುದು.


ಯೆಹೋಯಾಕೀನನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಹದಿನೆಂಟು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸಗಳ ಕಾಲ ರಾಜ್ಯವನ್ನಾಳಿದನು. ಅವನು ಯೆಹೋವನ ಚಿತ್ತಕ್ಕನುಸಾರವಾಗಿ ನಡೆಯಲಿಲ್ಲ. ಯೆಹೋಯಾಕೀನನು ದೇವರಿಗೆ ವಿರುದ್ಧವಾಗಿ ಪಾಪ ಮಾಡಿದನು.


ಯೆಹೋಯಾಕೀಮನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಯೆಹೋಯಾಕೀಮನು ಯೆಹೋವನ ಚಿತ್ತಕ್ಕೆ ಒಳಗಾಗಲಿಲ್ಲ. ಅವನು ತನ್ನ ದೇವರಾದ ಯೆಹೋವನ ವಿರುದ್ಧವಾಗಿ ಪಾಪಮಾಡಿದನು.


ಯೋಷೀಯನು ಅರಸನಾದಾಗ ಎಂಟು ವರ್ಷ ಪ್ರಾಯದವನಾಗಿದ್ದನು. ಅವನು ಮೂವತ್ತೊಂದು ವರ್ಷದ ತನಕ ಜೆರುಸಲೇಮಿನಲ್ಲಿ ರಾಜ್ಯಭಾರವನ್ನು ಮಾಡಿದನು.


ಮನಸ್ಸೆಯು ಪಟ್ಟಕ್ಕೆ ಬಂದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ರಾಜನಾಗಿ ಐವತ್ತೈದು ವರ್ಷ ರಾಜ್ಯಭಾರ ಮಾಡಿದನು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಕಾಲ ರಾಜ್ಯಭಾರ ಮಾಡಿದನು.


ಅವನು ತನ್ನ ಇಪ್ಪತ್ತಮೂರನೆ ವಯಸ್ಸಿನಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳ ಕಾಲ ಆಳಿದನು.


ದೇವರು ಸೇನಾಪತಿಗಳನ್ನೂ ಸರ್ಕಾರದ ಅಧಿಪತಿಗಳನ್ನೂ ತೆಗೆದುಬಿಡುವನು. ಆತನು ಉತ್ತಮ ಸಲಹೆಗಾರರನ್ನೂ ಮಾಂತ್ರಿಕರನ್ನೂ ಭವಿಷ್ಯ ಹೇಳುವವರನ್ನೂ ತೊಲಗಿಸುವನು.


ಮಕ್ಕಳು ನನ್ನ ಜನರನ್ನು ಸೋಲಿಸಿಬಿಡುವರು. ಸ್ತ್ರೀಯರು ನನ್ನ ಜನರನ್ನು ಆಳುವರು. ನನ್ನ ಜನರೇ, ನಿಮ್ಮ ಮಾರ್ಗದರ್ಶಕರು ನಿಮ್ಮನ್ನು ತಪ್ಪುದಾರಿಯಲ್ಲಿ ನಡಿಸುವರು; ಸರಿಯಾದ ದಾರಿಯಿಂದ ನಿಮ್ಮನ್ನು ಅಡ್ಡದಾರಿಗೆ ನಡಿಸುವರು.


ಯೆಹೋವನು ಹೇಳುವುದೇನೆಂದರೆ: “ಚೀಯೋನಿನ ಸ್ತ್ರೀಯರು ವಯ್ಯಾರದಿಂದ ತಲೆಯಾಡಿಸುತ್ತಾ, ಕುಡಿನೋಟ ಬೀರುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆಯನ್ನು ಝಣಝಣಿಸುತ್ತಾ ನಡೆಯುತ್ತಾರೆ.”


ಯೆಹೋವನಿಗೆ ಅವರ ಮೇಲೆ ಕೋಪ ಬಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನ್ನು ತನ್ನಿದ ದೂರ ಎಸೆದುಬಿಟ್ಟನು. ಚಿದ್ಕೀಯನು ಬಾಬಿಲೋನ್ ರಾಜನ ವಿರುದ್ಧವಾಗಿ ದಂಗೆ ಎದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು