Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:5 - ಪರಿಶುದ್ದ ಬೈಬಲ್‌

5 ಪ್ರಜೆಗಳು ಒಬ್ಬರಿಗೊಬ್ಬರು ವಿರೋಧಿಗಳಾಗುವರು; ಬಾಲಕರು ಹಿರಿಯರನ್ನು ಗೌರವಿಸರು. ಸಾಮಾನ್ಯರು ಗಣ್ಯವ್ಯಕ್ತಿಗಳನ್ನು ಸನ್ಮಾನಿಸರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪ್ರಜೆಗಳೆಲ್ಲ ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು. ನೆರೆಹೊರೆಯವರನ್ನು ನಿಂದಿಸುವರು. ಕಿರಿಯರು ಹಿರಿಯರನ್ನು, ದುಷ್ಟರು ಶಿಷ್ಟರನ್ನು ಹೀಯಾಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮನುಷ್ಯನಿಗೆ ವಿರೋಧವಾಗಿ ಮನುಷ್ಯನು, ನೆರೆಯವನಿಗೆ ವಿರೋಧವಾಗಿ ನೆರೆಯವನು ಹಿಂಸಿಸುವನು. ಹುಡುಗನು ವೃದ್ಧನ ವಿರೋಧವಾಗಿಯೂ, ನೀಚನು ಘನವಂತನ ವಿರೋಧವಾಗಿಯೂ ಸೊಕ್ಕಿನಿಂದ ವರ್ತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:5
28 ತಿಳಿವುಗಳ ಹೋಲಿಕೆ  

ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.


ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.


ನಂತರ ಜನರು ಅಲ್ಲಿಯೇ ಯೇಸುವಿನ ಮುಖದ ಮೇಲೆ ಉಗುಳಿದರು. ಮುಷ್ಠಿಯಿಂದ ಆತನನ್ನು ಗುದ್ದಿದರು. ಆತನ ಕೆನ್ನೆಗೆ ಹೊಡೆದರು.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


ಆ ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ.


ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.


ಎಲೀಷನು ಆ ನಗರದಿಂದ ಬೇತೇಲಿಗೆ ಹೋದನು. ಎಲೀಷನು ನಗರದಿಂದ ಬೆಟ್ಟದ ಮೇಲಕ್ಕೆ ಹೋಗುತ್ತಿದ್ದಾಗ, ಕೆಲವು ಬಾಲಕರು ನಗರದ ಕಡೆಯಿಂದ ಇಳಿಯುತ್ತಿದ್ದರು. ಅವರು ಎಲೀಷನನ್ನು ಹಾಸ್ಯಮಾಡಿ, “ಮೇಲಕ್ಕೆ ಹೋಗು, ಬೋಳುತಲೆಯವನೇ, ಮೇಲಕ್ಕೆ ಹೋಗು, ಬೋಳುತಲೆಯವನೇ” ಎಂದರು.


“ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!


ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.


ದೇವರು ಹೇಳುವುದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.


ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.


ಈ ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳುಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು