ಯೆಶಾಯ 3:7 - ಪರಿಶುದ್ದ ಬೈಬಲ್7 ಆದರೆ ಆ ಸಹೋದರನು ಎದ್ದುನಿಂತು, “ನನ್ನಿಂದ ಆಗುವುದಿಲ್ಲ, ನನ್ನ ಮನೆಯಲ್ಲಿ ಸಾಕಷ್ಟು ಧಾನ್ಯವಾಗಲಿ ಬಟ್ಟೆಯಾಗಲಿ ಇಲ್ಲ. ನನ್ನನ್ನು ನಾಯಕನನ್ನಾಗಿ ಮಾಡಬೇಡಿ” ಎಂದು ಹೇಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ, ‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ: ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’” ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಆ ಸಹೋದರನು ಹೂಂಕರಿಸಿ, “ಈ ನಾಡಿಗೆ ವ್ರಣವೈದ್ಯನಾಗಿರಲು ನನಗಿಷ್ಟವಿಲ್ಲ. ಮನೆಯಲ್ಲಿ ತಿನ್ನಲು ಅನ್ನವಿಲ್ಲ, ಉಡಲು ಬಟ್ಟೆಯಿಲ್ಲ. ನನ್ನನ್ನು ಜನನಾಯಕನನ್ನಾಗಿ ಮಾಡುವುದು ಬೇಡ,” ಎಂದು ತಿರಸ್ಕಾರದಿಂದ ಉತ್ತರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಣ್ಣನು ಹೂಂಕರಿಸಿ ದೇಶದ ವ್ರಣವೈದ್ಯನಾಗಿರುವದಕ್ಕೆ ನನಗಿಷ್ಟವಿಲ್ಲ, ನನ್ನ ಮನೆಯಲ್ಲಿ ಅನ್ನವೆಲ್ಲಿ, ಅಂಗಿಯೆಲ್ಲಿ? ನನ್ನನ್ನು ಜನದೊಡೆಯನನ್ನಾಗಿ ಮಾಡಬೇಡಿರಿ ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ದಿನದಲ್ಲಿ ಅವನು ಆಣೆಯಿಟ್ಟು, “ನಾನು ಉಪಶಮನ ಮಾಡುವವನಾಗುವುದಿಲ್ಲ. ಏಕೆಂದರೆ ನನ್ನ ಮನೆಯಲ್ಲಿ ಅನ್ನವಾಗಲಿ, ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ,” ಎಂದು ಉತ್ತರಿಸುವನು. ಅಧ್ಯಾಯವನ್ನು ನೋಡಿ |
ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.
ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.