ಯೆಶಾಯ 30:1 - ಪರಿಶುದ್ದ ಬೈಬಲ್1 ಯೆಹೋವನು ಹೀಗೆನ್ನುತ್ತಾನೆ: “ಈ ಮಕ್ಕಳನ್ನು ನೋಡಿರಿ, ಅವರು ನನಗೆ ವಿಧೇಯರಾಗುತ್ತಿಲ್ಲ. ಅವರು ಯೋಜನೆಗಳನ್ನು ತಯಾರಿಸುತ್ತಾರೆ, ಆದರೆ ನನ್ನಿಂದ ಸಹಾಯವನ್ನು ಕೇಳುತ್ತಿಲ್ಲ. ಅವರು ಬೇರೆ ರಾಜ್ಯಗಳೊಂದಿಗೆ ಒಪ್ಪಂದ ಮಾಡುತ್ತಾರೆ; ಆದರೆ ನನ್ನ ಆತ್ಮವು ಅದಕ್ಕೆ ಒಪ್ಪುತ್ತಿಲ್ಲ. ಈ ಜನರು ತಮ್ಮ ಪಾಪಗಳಿಗೆ ಇನ್ನೂ ಹೆಚ್ಚು ಪಾಪವನ್ನು ಕೂಡಿಸಿಟ್ಟುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಹೀಗೆ ನುಡಿಯುತ್ತಾನೆ :- ದ್ರೋಹಿಗಳಾದ [ನನ್ನ] ಮಕ್ಕಳ ಗತಿಯನ್ನು ಏನು ಹೇಳಲಿ! ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಸಾಗಿಸಿ ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೆಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ದ್ರೋಹಿಗಳಾದ ಮಕ್ಕಳಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಆಲೋಚನೆಯನ್ನು ಮಾಡುತ್ತಾರೆ ಆದರೆ ನನ್ನಿಂದಲ್ಲ. ನನ್ನ ಆತ್ಮ ಪ್ರೇರಿತರಾಗದೆ ಉಪಾಯಗಳನ್ನು ಮಾಡುತ್ತಾರೆ, ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”
“ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.
ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.