16 ನೀವು, “ನಮಗೆ ಸಹಾಯ ಬೇಡ. ಓಡಿಹೋಗಲು ಕುದುರೆಗಳು ಬೇಕು” ಎಂದು ಹೇಳುವಿರಿ. ಅದು ಸರಿಯಾದ ಮಾತು. ನೀವು ಕುದುರೆಗಳ ಮೂಲಕವೇ ಓಡುವಿರಿ. ಆದರೆ ಶತ್ರುಗಳು ನಿಮ್ಮನ್ನು ಹಿಂದಟ್ಟುವರು. ಅವರು ನಿಮ್ಮ ಕುದುರೆಗಳಿಗಿಂತ ವೇಗಶಾಲಿಗಳಾಗಿದ್ದಾರೆ.
16 ಬದಲಿಗೆ, “ಬೇಡ ಬೇಡ, ನಾವು ಕುದುರೆಗಳ ಮೇಲೆ ಓಡಿಹೋಗುತ್ತೇವೆ,” ಎಂದುಕೊಂಡಿರಿ. ಅಂತೆಯೇ ಓಡಿಹೋಗುವಿರಿ.” ನಾವು ದೌಡೋಡುವ ಕುದುರೆಗಳ ಮೇಲೆ ಸವಾರಿಮಾಡುತ್ತೇವೆ,” ಎಂದುಕೊಂಡಿರಿ. ಅಂತೆಯೇ ದೌಡೋಡುವವರೇ ನಿಮ್ಮನ್ನು ಅಟ್ಟಿಕೊಂಡುಬರುವರು.
16 ಆದರೆ ನೀವು, ‘ಬೇಡವೇ ಬೇಡ. ಏಕೆಂದರೆ ನಾವು ಕುದುರೆಗಳ ಮೇಲೆ ಓಡುವೆವು,’ ಎಂದುಕೊಂಡಿದ್ದರಿಂದ ನೀವು ಓಡಿಹೋಗುವಿರಿ, ನಾವು ವೇಗವಾಗಿ ಸವಾರಿ ಮಾಡುವೆವು, ಎಂದುಕೊಂಡಿದ್ದರಿಂದ ಆ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.
ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.
ಈಜಿಪ್ಟಿನ ಜನರು ಮನುಷ್ಯಮಾತ್ರದವರೇ. ಅವರು ದೇವರಲ್ಲ. ಈಜಿಪ್ಟಿನ ಕುದುರೆಗಳು ಪ್ರಾಣಿಗಳಾಗಿವೆ. ಅವುಗಳು ಆತ್ಮವಲ್ಲ. ಯೆಹೋವನು ತನ್ನ ಕೈಯನ್ನು ಚಾಚುವಾಗ ಸಹಾಯ ಮಾಡುವವನು (ಈಜಿಪ್ಟ್) ಸೋಲುವನು. ಸಹಾಯ ಪಡೆದವನು (ಯೆಹೂದ) ಬೀಳುವನು. ಅವರೆಲ್ಲರೂ ಒಟ್ಟಿಗೆ ನಾಶವಾಗುವರು.
ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು.
ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.
ನಮ್ಮನ್ನು ಅಟ್ಟಿಸಿಕೊಂಡು ಬಂದ ಜನರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತಲೂ ವೇಗಶಾಲಿಗಳಾಗಿದ್ದರು. ಅವರು ನಮ್ಮನ್ನು ಬೆಟ್ಟಗಳಿಗೆ ಅಟ್ಟಿಸಿಕೊಂಡು ಬಂದರು. ನಮ್ಮನ್ನು ಹಿಡಿಯುವುದಕ್ಕಾಗಿ ಮರುಭೂಮಿಯಲ್ಲಿ ಅವಿತುಕೊಂಡರು.
ಆ ದಿನ ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿ ನುಗ್ಗಿತ್ತು. ಜೆರುಸಲೇಮಿನ ಸೈನಿಕರು ಓಡಿಹೋದರು. ಅವರು ರಾತ್ರಿಯ ಸಮಯದಲ್ಲಿ ಎರಡು ಗೋಡೆಗಳ ಮಧ್ಯದ ಬಾಗಿಲಿನಿಂದ ನಗರದಿಂದ ಓಡಿಹೋದರು. ಆ ಬಾಗಿಲು ರಾಜನ ಉದ್ಯಾನವನದ ಹತ್ತಿರ ಇತ್ತು. ಬಾಬಿಲೋನಿನ ಸೈನಿಕರು ಜೆರುಸಲೇಮ್ ನಗರವನ್ನು ಮುತ್ತಿದ್ದರೂ ಜೆರುಸಲೇಮಿನ ಸೈನಿಕರು, ಮರುಭೂಮಿಯ ಕಡೆಗೆ ಓಡಿಹೋದರು.
ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.
“ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.
“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.
ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಆ ಅಧಿಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು.