Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:17 - ಪರಿಶುದ್ದ ಬೈಬಲ್‌

17 ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಬ್ಬ ಸೈನಿಕನ ಬೆದರಿಕೆಗೆ ಸಾವಿರ ಜನರು ಪರಾರಿಯಾಗುವರು. ಐದು ಸೈನಿಕರ ಬೆದರಿಕೆಗೆ ನೀವೆಲ್ಲರೂ ಓಡಿಹೋಗುವಿರಿ. ಕಟ್ಟಕಡೆಗೆ ಬೆಟ್ಟದ ತುದಿಯಲ್ಲಿರುವ ಧ್ವಜಸ್ತಂಭದಂತೆ, ಗುಡ್ಡದ ಮೇಲಿರುವ ಕೈಕಂಬದಂತೆ ಒಬ್ಬಂಟಿಗನಾಗಿ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಬ್ಬನ ಬೆದರಿಕೆಗೆ ಸಾವಿರ ಜನರು ಓಡುವರು; ಐವರು ಬೆದರಿಸುವದರಿಂದ ನೀವು ಓಡಿ ಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಗಣ ಕಂಬದಂತೆಯೂ [ಒಂಟಿಯಾಗಿ] ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಒಬ್ಬನ ಬೆದರಿಕೆಗೆ ಸಾವಿರ ಜನರು ಓಡುವರು, ಐವರು ಹೆದರಿಸುವುದರಿಂದ ನೀವೆಲ್ಲರೂ ಓಡಿಹೋಗುವಿರಿ, ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:17
20 ತಿಳಿವುಗಳ ಹೋಲಿಕೆ  

“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.


ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ.


ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಓಡಿಸುವರು; ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಓಡಿಸುವರು; ನೀವು ನಿಮ್ಮ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಕೊಲ್ಲುವಿರಿ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಇದು, ಆಲಿವ್ ಮರದ ಕೆಲವು ಕೊಂಬೆಗಳು ಮುರಿಯಲ್ಪಟ್ಟಾಗ, ಕಾಡುಆಲಿವ್ ಮರದ ಕೊಂಬೆಯೊಂದು ಮೊದಲಿನ ಆಲಿವ್ ಮರಕ್ಕೆ ಸೇರಿಕೊಂಡಂತಿದೆ. ಯೆಹೂದ್ಯರಲ್ಲದ ನೀವು ಕಾಡುಕೊಂಬೆಗೆ ಸಮಾನವಾಗಿದ್ದೀರಿ. ಆದರೆ ಈಗ ನೀವು ಮೊದಲನೆ ಮರದ (ಯೆಹೂದ್ಯರ) ಶಕ್ತಿಯಲ್ಲಿಯೂ ಜೀವದಲ್ಲಿಯೂ ಪಾಲುಗಾರರಾಗಿದ್ದೀರಿ.


ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.


ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.


ನಮ್ಮನ್ನು ಅಟ್ಟಿಸಿಕೊಂಡು ಬಂದ ಜನರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತಲೂ ವೇಗಶಾಲಿಗಳಾಗಿದ್ದರು. ಅವರು ನಮ್ಮನ್ನು ಬೆಟ್ಟಗಳಿಗೆ ಅಟ್ಟಿಸಿಕೊಂಡು ಬಂದರು. ನಮ್ಮನ್ನು ಹಿಡಿಯುವುದಕ್ಕಾಗಿ ಮರುಭೂಮಿಯಲ್ಲಿ ಅವಿತುಕೊಂಡರು.


ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿ ಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು