ಯೆಶಾಯ 30:2 - ಪರಿಶುದ್ದ ಬೈಬಲ್2 ಈ ಮಕ್ಕಳು ಈಜಿಪ್ಟಿಗೆ ಸಹಾಯಕ್ಕಾಗಿ ಹೋಗುತ್ತಾರೆ, ಆದರೆ ಅವರು ಹಾಗೆ ಮಾಡುವದು ಸರಿಯೋ ಎಂದು ನನ್ನ ಹತ್ತಿರ ಕೇಳುವದಿಲ್ಲ. ಫರೋಹನು ತಮ್ಮನ್ನು ರಕ್ಷಿಸುತ್ತಾನೆಂದು ಅವರು ತಿಳಿದಿದ್ದಾರೆ. ಈಜಿಪ್ಟೇ ತಮ್ಮನ್ನು ಕಾಪಾಡಬೇಕು ಎಂಬುದು ಅವರ ಇಷ್ಟ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನನ್ನ ಸಲಹೆಯನ್ನು ಕೇಳದೆ ಈಜಿಪ್ಟಿಗೆ ಪ್ರಯಾಣ ಬೆಳೆಸಿದ್ದಾರೆ. ಫರೋಹನ ಆಶ್ರಯವನ್ನು ಬಯಸುತ್ತಾರೆ. ಈಜಿಪ್ಟಿನವರನ್ನು ಮರೆಹೋಗಬೇಕೆಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಫರೋಹನ ಆಶ್ರಯವನ್ನು ಪಡೆದು ಐಗುಪ್ತವನ್ನು ಮರೆಹೊಗಬೇಕೆಂದು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಫರೋಹನಲ್ಲಿ ತಾವು ಬಲಗೊಳ್ಳುವ ಆಶ್ರಯವನ್ನು ಈಜಿಪ್ಟಿನ ನೆರಳಿನಲ್ಲಿ ಭರವಸವಿಡಬೇಕೆಂದು ನನ್ನ ಮಾತನ್ನು ಕೇಳದೆ, ಈಜಿಪ್ಟಿಗೆ ಪ್ರಯಾಣವಾಗಿ ಹೊರಟಿದ್ದಾರೆ. ಅಧ್ಯಾಯವನ್ನು ನೋಡಿ |
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.
ಅದಲ್ಲದೆ ಆಗ ಫರೋಹನ ಸೈನ್ಯವು ಈಜಿಪ್ಟಿನಿಂದ ಯೆಹೂದದ ಕಡೆಗೆ ಹೊರಟಿತ್ತು. ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶದಿಂದ ಬಾಬಿಲೋನ್ ಸೈನ್ಯವು ಜೆರುಸಲೇಮ್ ನಗರಕ್ಕೆ ಮುತ್ತಿಗೆ ಹಾಕಿತ್ತು. ಆಗ ಈಜಿಪ್ಟಿನ ಸೈನ್ಯವು ತಮ್ಮ ಕಡೆ ಬರುತ್ತಿದೆ ಎಂಬ ಸಮಾಚಾರವು ಬಂದಿತು. ಅದನ್ನು ಕೇಳಿ ಬಾಬಿಲೋನಿನ ಸೈನ್ಯವು ಈಜಿಪ್ಟಿನ ಸೈನ್ಯವನ್ನೆದುರಿಸಲು ಜೆರುಸಲೇಮನ್ನು ಬಿಟ್ಟುಹೋಗಿತ್ತು.)
ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”
ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”