Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:21 - ಪರಿಶುದ್ದ ಬೈಬಲ್‌

21 ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಈ ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:21
18 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.


ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


“ಆದ್ದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ.


ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ರಕ್ಷಕನೂ ಇಸ್ರೇಲರ ಪರಿಶುದ್ಧನೂ ಆಗಿರುವ ಯೆಹೋವನು ಹೇಳುವುದೇನೆಂದರೆ, “ನಾನೇ ನಿಮ್ಮ ದೇವರಾದ ಯೆಹೋವನು. ಯಾವದು ಒಳ್ಳೆಯದೋ, ಪ್ರಯೋಜನಕರವೋ ಅದನ್ನು ಮಾಡಲು ನಿಮಗೆ ಕಲಿಸುತ್ತೇನೆ. ನೀವು ಹೋಗಲೇಬೇಕಾದ ದಾರಿಯಲ್ಲಿ ನಿಮ್ಮನ್ನು ನಡಿಸುವೆನು.


ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.


ಒಳ್ಳೆಯ ಮಾರ್ಗವನ್ನು ಬಿಟ್ಟು ಹೋಗಬೇಡ; ಆದರೆ ಕೆಡುಕಿಗೆ ಯಾವಾಗಲೂ ದೂರವಾಗಿರು.


ಅವರಲ್ಲಿ ಅನೇಕರು ಸರಿಯಾಗಿ ತಿಳಿದುಕೊಳ್ಳಲಿಲ್ಲ. ಆದ್ದರಿಂದ ಅವರು ತಪ್ಪಿಹೋದರು. ಆದರೆ ಅವರು ಪಾಠಗಳನ್ನು ಕಲಿತುಕೊಳ್ಳುವರು.”


ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಯೋಷೀಯನು ಮಾಡಿದನು. ಯೋಷೀಯನು ತನ್ನ ಪೂರ್ವಿಕನಾದ ದಾವೀದನಂತೆ ದೇವರನ್ನು ಅನುಸರಿಸಿದನು. ಯೋಷೀಯನು ದೇವರ ಬೋಧನೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಅವುಗಳನ್ನು ಅನುಸರಿಸಿದನು.


“ಯೆಹೋವನ ಆಜ್ಞೆಗಳನ್ನೆಲ್ಲಾ ಜಾಗರೂಕತೆಯಿಂದ ಕೈಕೊಂಡು ನಡೆಯಿರಿ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಎಲ್ಲವನ್ನು ಪಾಲಿಸಿರಿ. ಆ ಧರ್ಮಶಾಸ್ತ್ರಕ್ಕೆ ವಿಮುಖರಾಗಬೇಡಿ.


ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ಪರಿಶುದ್ಧವಾಗಿರುವಾತನು (ದೇವರು ಅಥವಾ ಕ್ರಿಸ್ತನು) ಕೊಟ್ಟಿರುವ ವರವನ್ನು ನೀವು ಹೊಂದಿದ್ದೀರಿ. ಆದ್ದರಿಂದ ನೀವೆಲ್ಲರೂ ಸತ್ಯವನ್ನು ತಿಳಿದಿದ್ದೀರಿ.


ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು