ಯೆಶಾಯ 30:22 - ಪರಿಶುದ್ದ ಬೈಬಲ್22 ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ ಎರಕದ ನಿಮ್ಮ ಬೊಂಬೆಗಳ ಬಂಗಾರದ ಮುಲಾಮನ್ನೂ ನೀವು ಹೊಲಸು ಮಾಡಿ ಆ ವಿಗ್ರಹಗಳನ್ನು - ತೊಲಗಿ ಎಂದು ಹೊಲೆಯಂತೆ ಬಿಸಾಟುಬಿಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.