Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:24 - ಪರಿಶುದ್ದ ಬೈಬಲ್‌

24 ನಿಮ್ಮ ದನಕರುಗಳಿಗೂ ಕತ್ತೆಗಳಿಗೂ ಬೇಕಾದಷ್ಟು ಮೇವಿದೆ. ಆಹಾರವು ಯಥೇಚ್ಛವಾಗಿರುವದು. ನಿಮ್ಮ ದನಕರುಗಳು ಮೊರದಿಂದಲೂ ಕವೇಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹೊಲಗೇಯುವ ನಿಮ್ಮ ಎತ್ತುಕತ್ತೆಗಳು ಮೊರದಿಂದಲೂ ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೊಲಗೇಯುವ ಎತ್ತುಕತ್ತೆಗಳು ಮೊರದಿಂದಲೂ ಕವೇಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೊಲಗೆಯ್ಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:24
10 ತಿಳಿವುಗಳ ಹೋಲಿಕೆ  

ಈ ಭೀಕರವಾದ ಬರಗಾಲವು ಆರಂಭವಾಗಿ ಈಗಾಗಲೇ ಎರಡು ವರ್ಷಗಳಾಯಿತು. ಇನ್ನೂ ಐದು ವರ್ಷಗಳವರೆಗೆ ಬಿತ್ತನೆ ಇರುವುದಿಲ್ಲ; ಸುಗ್ಗಿಯೂ ಇರುವುದಿಲ್ಲ.


ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.


“ಕಣವನ್ನು ತುಳಿಯಲು ಎತ್ತುಗಳನ್ನು ಉಪಯೋಗಿಸುವಾಗ ಅವುಗಳು ಧಾನ್ಯ ತಿನ್ನುತ್ತವೆ ಎಂದು ಅವುಗಳ ಬಾಯಿಗಳನ್ನು ಕಟ್ಟಬಾರದು.


ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು.


“ನೀವು ವಾರದಲ್ಲಿ ಆರುದಿನ ಕೆಲಸ ಮಾಡುವಿರಿ. ಆದರೆ ಏಳನೆಯ ದಿನದಲ್ಲಿ ನೀವು ವಿಶ್ರಮಿಸಿಕೊಳ್ಳಬೇಕು. ನೀವು ಬಿತ್ತುವ ಮತ್ತು ಕೊಯ್ಯುವ ಸಮಯದಲ್ಲಿಯೂ ವಿಶ್ರಮಿಸಿಕೊಳ್ಳಬೇಕು.


ಬಳಿಕ, “ಹೌದು, ನಿನ್ನ ಒಂಟೆಗಳಿಗೆ ಹುಲ್ಲೂ ಮೇವೂ ನಮ್ಮಲ್ಲಿವೆ ಮತ್ತು ನೀವು ಇಳಿದುಕೊಳ್ಳಲೂ ಸ್ಥಳವಿದೆ” ಎಂದಳು.


ನಿಮ್ಮಲ್ಲಿ ಕೆಲವರು ಪ್ರತಿಯೊಂದು ನೀರಿನ ತೊರೆಗಳ ಬಳಿಯಲ್ಲಿ ಬೀಜ ಬಿತ್ತುವರು. ಅದರ ಸುತ್ತಲೂ ಹೋಗಿ ಯಾವ ಆತಂಕವಿಲ್ಲದೆ ತಿನ್ನಲು ನೀವು ನಿಮ್ಮ ಪಶುಗಳನ್ನು ಬಿಡುವಿರಿ; ಸಂತಸದಿಂದ ಇರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು