Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:27 - ಪರಿಶುದ್ದ ಬೈಬಲ್‌

27 ಇಗೋ, ಯೆಹೋವನ ನಾಮವು ಬಹುದೂರದಿಂದ ಬರುವದು. ಆತನ ಕೋಪವು ದಟ್ಟವಾದ ಹೊಗೆಯೊಂದಿಗೆ ಇರುವ ಬೆಂಕಿಯೋಪಾದಿಯಲ್ಲಿರುವದು. ಯೆಹೋವನ ಬಾಯಿ ಕೋಪದಿಂದಲೂ ನಾಲಿಗೆಯು ಸುಡುವ ಬೆಂಕಿಯಂತೆಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಗೋ, ಯೆಹೋವನಾಮಧೇಯನು ದೂರದಿಂದ ಬರುತ್ತಾನೆ; ಆತನ ಕೋಪವು ಉರಿಯುತ್ತಿದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇಳುವ ಹೊಗೆಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ಆತನ ನಾಲಿಗೆಯು ದಹಿಸುವ ಅಗ್ನಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:27
26 ತಿಳಿವುಗಳ ಹೋಲಿಕೆ  

ಏಕೆಂದರೆ ನಮ್ಮ “ದೇವರು ನಾಶಮಾಡುವ ಬೆಂಕಿಯಂತಿದ್ದಾನೆ.”


ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು.


ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.


“ನಾನು ನೋಡುತ್ತಿದ್ದಂತೆಯೇ, ಆಸನಗಳನ್ನು ಅವುಗಳ ಸ್ಥಳದಲ್ಲಿ ಹಾಕಲಾಯಿತು. ಪುರಾತನ ರಾಜನು ತನ್ನ ಆಸನದ ಮೇಲೆ ಕುಳಿತುಕೊಂಡನು. ಆತನ ಉಡುಪು ಬಹಳ ಶುಭ್ರವಾಗಿತ್ತು. ಅದು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಕೂದಲು ಶುಭ್ರವಾಗಿತ್ತು. ಅದು ಬಿಳಿಯ ಉಣ್ಣೆಯಂತೆ ಶುಭ್ರವಾಗಿತ್ತು. ಆತನ ಆಸನವು ಬೆಂಕಿಯಿಂದ ಮಾಡಲಾಗಿತ್ತು. ಅದರ ಚಕ್ರಗಳು ಬೆಂಕಿಯ ಜ್ವಾಲೆಗಳಿಂದ ಮಾಡಲಾಗಿದ್ದವು.


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯಪಟ್ಟು ಗೌರವಿಸುವರು. ಪೂರ್ವದಲ್ಲಿದ್ದ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ ಯೆಹೋವನು ಬೇಗನೆ ಬರುವನು.


ಎದೋಮಿನ ನದಿಗಳು ಕರಗಿರುವ ರಾಳದಂತಿರುವದು. ಅದರ ನೆಲವು ಸುಡುವ ಗಂಧಕದಂತಿರುವದು.


ಎಲುಬುಗಳು ಬೂದಿಯಾಗುವ ತನಕ ಜನರು ಸುಡಲ್ಪಡುವರು. ಅವರು ಮುಳ್ಳುಗಳಂತೆಯೂ ಒಣಪೊದೆಗಳಂತೆಯೂ ಬೇಗನೆ ಸುಟ್ಟುಹೋಗುವರು.


ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.


ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.


ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪದಿಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ?


ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.


ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.


ನೀವು ಇತರ ದೇವರುಗಳನ್ನು ಪೂಜಿಸುವುದನ್ನು ಜೀವಸ್ವರೂಪನಾದ ಯೆಹೋವನು ದ್ವೇಷಿಸುವುದರಿಂದ ಬೆಂಕಿಯಂತೆ ಆತನು ನಿಮ್ಮನ್ನು ದಹಿಸಿ ಬಿಡುವನು.


ಯೆಹೋವನೂ ಆ ಸೈನ್ಯವೂ ದೂರದಿಂದ ಬರುತ್ತಿದ್ದಾರೆ. ದಿಗಂತದ ಆಚೆಯಿಂದ ಅವರು ಬರುತ್ತಿದ್ದಾರೆ. ತನ್ನ ಸಿಟ್ಟನ್ನು ಪ್ರದರ್ಶಿಸುವದಕೋಸ್ಕರ ಯೆಹೋವನು ಈ ಸೈನ್ಯವನ್ನು ಉಪಯೋಗಿಸುವನು. ಈ ಸೈನ್ಯವು ಇಡೀ ಭೂಮಿಯನ್ನು ಹಾಳು ಮಾಡುವುದು.”


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.


ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.


ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”


ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು