Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:29 - ಪರಿಶುದ್ದ ಬೈಬಲ್‌

29 ಆ ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀವೋ ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ; ಇಸ್ರಾಯೇಲ್ಯರ ಶರಣನ ಸಾನ್ನಿಧ್ಯವನ್ನು ಬಯಸಿ ಯೆಹೋವನ ಪರ್ವತಕ್ಕೆ ಪಿಳ್ಳಂಗೋವಿಯ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಆದಂತೆ ನಿಮಗೆ ಹಾಡು ಇರುವುದು. ಯೆಹೋವ ದೇವರ ಪರ್ವತವಾಗಿರುವ ಇಸ್ರಾಯೇಲಿನ ಬಂಡೆಯ ಬಳಿಗೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:29
27 ತಿಳಿವುಗಳ ಹೋಲಿಕೆ  

ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.


ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಆಗ ಶಿಷ್ಯರೆಲ್ಲರೂ ಪಸ್ಕಹಬ್ಬದ ಹಾಡನ್ನು ಹಾಡಿದರು. ಬಳಿಕ ಅವರು ಆಲಿವ್ ಗುಡ್ಡಕ್ಕೆ ಹೋದರು.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು: ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ. ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ.


ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.


ನೀನು ನನಗೆ ಆಶ್ರಯದುರ್ಗವಾಗಿರುವೆ. ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ. ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.


ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ. ನಮ್ಮ ದೇವರಲ್ಲದೆ ಬೇರೆ ಯಾವ ಬಂಡೆಯೂ ಇಲ್ಲ.


ನಮ್ಮ ವೈರಿಗಳ ಬಂಡೆಯು ನಮ್ಮ ಬಂಡೆಯಂತೆ ಬಲಶಾಲಿಯಲ್ಲ. ವೈರಿಗಳಿಗೂ ಇದು ಗೊತ್ತಿದೆ.


ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.


ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷವಾದ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿಯೇ ಸಾಯಂಕಾಲ ಸೂರ್ಯಾಸ್ತಮಾನ ಕಾಲದಲ್ಲಿ ಪಸ್ಕಹಬ್ಬದ ಪಶುವನ್ನು ಅರ್ಪಿಸಬೇಕು. ದೇವರು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಕಾಲವನ್ನು ಈ ಪವಿತ್ರ ದಿನವು ನಿಮಗೆ ನೆನಪು ಮಾಡುತ್ತದೆ.


ಅದು ನಿಮಗಾಗಿ ವಿಶ್ರಾಂತಿಯ ವಿಶೇಷ ದಿನವಾಗಿರುವುದು. ನೀವು ಆಹಾರವನ್ನು ತಿನ್ನಬಾರದು. ತಿಂಗಳಿನ ಒಂಭತ್ತನೆಯ ದಿನದ ನಂತರ ಸಾಯಂಕಾಲದಲ್ಲಿ ಈ ವಿಶ್ರಾಂತಿಯ ವಿಶೇಷ ದಿನವನ್ನು ಪ್ರಾರಂಭಿಸುವಿರಿ. ಈ ವಿಶ್ರಾಂತಿಯ ವಿಶೇಷ ದಿನವು ಆ ಸಾಯಂಕಾಲದಿಂದ ಹಿಡಿದು ಮರುದಿನ ಸಾಯಂಕಾಲದವರೆಗೆ ಮುಂದುವರಿಯುವುದು.”


ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.


ಆತನ ಶ್ವಾಸವು (ಆತ್ಮ) ಒಂದು ಮಹಾನದಿಯಂತಿರುವದು. ಅದರ ನೀರು ಕುತ್ತಿಗೆಯ ತನಕ ಏರುವದು. ಯೆಹೋವನು ಜನಾಂಗಗಳಿಗೆ ನ್ಯಾಯತೀರಿಸುವನು. ಅವುಗಳನ್ನು ಜರಡಿಯಿಂದ ಜಾಲಾಡಿಸುವನು. ಯೆಹೋವನು ಅವುಗಳನ್ನು ನಿಯಂತ್ರಿಸುವನು. ಅದು ಪ್ರಾಣಿಗಳನ್ನು ನಿಯಂತ್ರಿಸುವ ಬಾಯಿಯಲ್ಲಿ ಹಾಕುವ ಕಡಿವಾಣದಂತಿರುವದು.


ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


“ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!”


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು