Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:3 - ಪರಿಶುದ್ದ ಬೈಬಲ್‌

3 “ಆದರೆ ನಾನು ನಿಮಗೆ ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ಅಡಗಿಕೊಂಡರೆ ಏನೂ ಪ್ರಯೋಜನವಾಗದು. ಈಜಿಪ್ಟು ನಿಮ್ಮನ್ನು ರಕ್ಷಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು, ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಫರೋಹನ ಆಶ್ರಯದಿಂದ ಅವರಿಗೆ ನಾಚಿಕೆಯಾಗುವುದು. ಈಜಿಪ್ಟಿನವರನ್ನು ಮರೆಹೋಗುವುದರಿಂದ ಅವರಿಗೆ ಅವಮಾನ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದಕಾರಣ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆ, ಐಗುಪ್ತವನ್ನು ಮರೆಹೊಗುವದರಿಂದ ಅವಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯೂ, ಈಜಿಪ್ಟ್ ನೆರಳಿನ ಭರವಸೆಯಿಂದ ನಿಮಗೆ ನಿಂದೆಯೂ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:3
18 ತಿಳಿವುಗಳ ಹೋಲಿಕೆ  

ಜನರು ಇಥಿಯೋಪ್ಯದ ಕಡೆಗೆ ಸಹಾಯಕ್ಕಾಗಿ ನೋಡುವರು. ಅವರು ಕಂಗೆಟ್ಟು ಹೋಗುವರು. ಈಜಿಪ್ಟಿನ ಮಹಿಮೆಯನ್ನು ಗಮನಿಸಿದವರು ಈಗ ನಾಚಿಕೆಯಲ್ಲಿ ಬೀಳುವರು” ಎನ್ನುವನು.


ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಆತನಲ್ಲಿ ನಂಬಿಕೆಯಿಡುವ ಯಾವ ವ್ಯಕ್ತಿಯೂ ನಾಚಿಕೆಗೆ ಗುರಿಯಾಗುವುದೇ ಇಲ್ಲ.”


ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.


ಈಜಿಪ್ಟು ನಿನಗೆ ಸಹಾಯ ಮಾಡುವುದೆಂದು ನಂಬಿರುವಿಯಾ? ಈಜಿಪ್ಟು ಒಂದು ಮುರಿದ ದಂಟು. ಅದರ ಮೇಲೆ ನೀನು ಭಾರಹಾಕಿದರೆ ಅದು ನಿನ್ನ ಅಂಗೈಯಲ್ಲಿ ರಂಧ್ರಮಾಡುವುದು. ಈಜಿಪ್ಟಿನ ರಾಜನಾದ ಫರೋಹನ ಸಹಾಯಕ್ಕಾಗಿ ಆಶ್ರಯಿಸಿಕೊಂಡ ಯಾವ ಜನರೂ ಅವನಲ್ಲಿ ಭರವಸೆ ಇಡಲಾಗದು.


ನೀನು ಮುರಿದುಬಿದ್ದಿರುವ ದಂಟನ್ನು ಊರುಗೋಲೆಂದು ನಂಬಿ ಭರವಸೆಯಿಟ್ಟಿರುವೆ! ಈಜಿಪ್ಟ್ ಊರುಗೋಲಾಗಿದೆ. ಒಬ್ಬ ಮನುಷ್ಯನು ಈ ಊರುಗೋಲಿನ ಮೇಲೆ ಭರವಸೆಯಿಟ್ಟರೆ ಅದು ಮುರಿದು ಬೀಳುತ್ತದೆ ಮತ್ತು ಅವನ ಕೈಯನ್ನೇ ಚುಚ್ಚಿ ಅವನಿಗೆ ನೋವನ್ನು ಉಂಟುಮಾಡುತ್ತದೆ! ಈಜಿಪ್ಟಿನ ರಾಜನು ತನ್ನನ್ನು ನಂಬಿದ ಜನರೆಲ್ಲರಿಗೂ ಇದೇ ರೀತಿಯಲ್ಲಿದ್ದಾನೆ.


ನಮ್ಮ ಶತ್ರುವನ್ನು ಸೋಲಿಸಲು ದಯವಿಟ್ಟು ನಮಗೆ ಸಹಾಯಮಾಡು. ಜನರು ನಮಗೆ ಸಹಾಯಮಾಡಲಾರರು!


ಸಮುದ್ರ ತೀರದಲ್ಲಿ ವಾಸಿಸುವವರು ಹೀಗೆ ಹೇಳುವರು: “ಆ ದೇಶದವರು ನಮಗೆ ಸಹಾಯ ಮಾಡುವರೆಂದು ಅವರನ್ನು ನಂಬಿದೆವು. ಅಶ್ಶೂರದ ಅರಸನಿಂದ ನಮ್ಮನ್ನು ಕಾಪಾಡುವಂತೆ ನಾವು ಅವರ ಬಳಿಗೆ ಓಡಿಹೋದೆವು. ಆದರೆ ಈಗ ನೋಡಿ, ಆ ದೇಶದವರು ಸೋತು ಹೋಗಿ ವೈರಿವಶವಾಗಿದ್ದಾರೆ. ಈಗ ನಾವು ಪಾರಾಗಲು ಹೇಗೆ ಸಾಧ್ಯ?”


ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.


“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’


ಈಗ ನೀವು ಇದನ್ನು ನಿಶ್ಚಿತವಾಗಿ ತಿಳಿದುಕೊಳ್ಳಿ. ನೀವು ಈಜಿಪ್ಟಿನಲ್ಲಿ ವಾಸಮಾಡಲು ಹೋಗಬೇಕೆನ್ನುವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಧಿಯಿಂದಾದರೂ ಸಾಯುವಿರಿ.”


ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು.


ಕಷ್ಟಕಾಲಗಳಲ್ಲಿ ಅಪನಂಬಿಗಸ್ತನನ್ನು ಆಶ್ರಯಿಸಿಕೊಳ್ಳುವುದು ಮುರುಕು ಹಲ್ಲಿನಿಂದ ತಿನ್ನುವಂತೆಯೂ ಕುಂಟುಕಾಲಿನಿಂದ ನಡೆಯುವಂತೆಯೂ ಇದೆ.


ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: “ಬಹುಬೇಗನೆ ನಾನು ಥೀಬಸ್ಸಿನ ಆಮೋನ್ ದೇವತೆಯನ್ನು ದಂಡಿಸುವೆನು. ನಾನು ಫರೋಹನನ್ನು, ಈಜಿಪ್ಟನ್ನು ಮತ್ತು ಅವಳ ದೇವರುಗಳನ್ನು ದಂಡಿಸುವೆನು. ನಾನು ಈಜಿಪ್ಟಿನ ರಾಜರನ್ನು ದಂಡಿಸುವೆನು. ಫರೋಹನನ್ನು ನಂಬಿದವರನ್ನು ದಂಡಿಸುವೆನು.


ಇಸ್ರೇಲ್ ಜನರು ಈಜಿಪ್ಟಿನ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಅವರ ಕೈಗಳನ್ನೂ ಭುಜಗಳನ್ನೂ ಗಾಯಗೊಳಿಸಿತು. ನಿನ್ನ ಸಹಾಯಕ್ಕಾಗಿ ಅವರು ನಿನ್ನನ್ನು ಆಶ್ರಯಿಸಿದರು. ಆದರೆ ನೀನು ಅವರ ಬೆನ್ನೆಲುಬನ್ನು ತಿರುಗಿಸಿ ಮುರಿದುಬಿಟ್ಟೆ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು